Thursday, November 19, 2026

ಪ್ರಾಯೋಗಿಕ ಆವೃತ್ತಿ

ಡಿಸಿಸಿ‌ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಸಿ.ಪಿ.ಉಮೇಶ್ ರಾಜೀನಾಮೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು, ಬಿಜೆಪಿ ಸರ್ಕಾರ ಆಳ್ವಿಕೆ ಕೊನೆಗೊಂಡ ಹಿನ್ನಲೆಯಲ್ಲಿ ಮಂಡ್ಯ ಡಿಸಿಸಿ‌ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬುಧವಾರ ಸಂಜೆ ಸಹಕಾರ ಸಂಘಗಳ‌‌ ನಿಬಂಧಕರಿಗೆ ಪತ್ರ ರವಾನಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾಮನಿರ್ದೇಶಿತ ಸದಸ್ಯನಾಗಿ ಡಿಸಿಸಿ ಬ್ಯಾಂಕ್’ಗೆ ಕಾಲಿಟ್ಟ ಉಮೇಶ್, ಜೆಡಿಎಸ್ ಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷ ಸ್ಥಾನಕ್ಕೇರಿದ್ದರು. ಸದ್ಯ ಮಂಡ್ಯ‌ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ