Monday, October 21, 2024

ಪ್ರಾಯೋಗಿಕ ಆವೃತ್ತಿ

ವಿಧಾನ ಪರಿಷತ್ ಸದಸ್ಯತ್ವಕ್ಕೆ ಯೋಗೇಶ್ವರ್ ರಾಜೀನಾಮೆ | HDK ವಿರುದ್ದ ಆಕ್ರೋಶ ಹೊರಹಾಕಿದ ಸೈನಿಕ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಸಿ ಪಿ ಯೋಗೇಶ್ವರ್ ಅವರು ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸಂಜೆ ನಾಲ್ಕು ಗಂಟೆಗೆ ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಪಕ್ಷೇತರ ಅಥವಾ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ರಾಜೀನಾಮೆ ನೀಡಲು ಹುಬ್ಬಳ್ಳಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ನನ್ನ ಮೇಲೆ ಅನವಶ್ಯಕವಾಗಿ ಆರೋಪ ಮಾಡುವ ಅಗತ್ಯವಿಲ್ಲ. ಹೆಚ್‌ಡಿಕೆ ಅವರು ನನಗೆ ಟಿಕೆಟ್ ಕೊಡದಿದ್ದರೆ ಅವರ ಮಗನಿಗೆ ಕೊಡಲಿ. ಆದರೆ, ಕಾಂಗ್ರೆಸ್ಸಿಗರ ಭೇಟಿ ಮಾಡಿದ್ದೆ ಎಂಬ ಸುಳ್ಳು ಆರೋಪ ಮಾಡುವುದು ಸರಿಯಲ್ಲ” ಎಂದರು.

nudikarnaraka.com

“ನಾನು ಈವರೆಗೂ ಕಾಂಗ್ರೆಸ್‌ನ ಯಾವ ನಾಯಕರನ್ನೂ ಭೇಟಿಯಾಗಿಲ್ಲ ಕಾಂಗ್ರೆಸ್ ನಾಯಕರ ಭೇಟಿ ಮಾಡಿದರೂ ಅದರಲ್ಲಿ ತಪ್ಪೇನಿಲ್ಲ. ಆದರೆ, ಇಲ್ಲಿಯವರೆಗೆ ಕಾಂಗ್ರೆಸ್‌ನ ಯಾರನ್ನೂ ನಾನು ಭೇಟಿ ಮಾಡಿಲ್ಲ” ಎಂದು ಹೇಳಿದರು

ಅವಕಾಶ ಕೊಟ್ಟರೆ ಎನ್‌ಡಿಎ ಅಭ್ಯರ್ಥಿ ಆಗುತ್ತೇನೆ, ಅವಕಾಶ ಸಿಗಬೇಕಷ್ಟೇ. ನಾನು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಮಾಡಿದರೆ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕು ಎಂದು ಆಸೆ ಇದೆ. ಆದರೆ, ಕುಮಾರಸ್ವಾಮಿ ಅವರು ತಮ್ಮ ಮಗನಿಗೆ ಟಿಕೆಟ್ ಕೊಡಬೇಕೆಂಬ ಮನಸ್ಸಿದೆ. ಅವರ ಮನಸ್ಸಿನಲ್ಲಿ ಆ ರೀತಿ ಇದ್ದರೆ ಏನು ಮಾಡಲಾಗುತ್ತದೆ” ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ವಿರುದ್ಧ ಯೋಗೇಶ್ವರ್ ಅಸಮಾಧಾನ

ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರ ಎಂಬ ಯಡಿಯೂರಪ್ಪ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಯೋಗೇಶ್ವರ್, “ಈ ಸಂದರ್ಭದಲ್ಲಿ ಯಡಿಯೂರಪ್ಪ ಆ ಹೇಳಿಕೆ ಕೊಡುವ ಅಗತ್ಯ ಇರಲಿಲ್ಲ. ಅವರು ಉದ್ದೇಶಪೂರ್ವಕ ಹೇಳಿಕೆ ಕೊಟ್ಟಿದ್ದಾರೆ. ಅವರ ಮೂಲಕ ಯಾರೋ ಈ ರೀತಿ ಹೇಳಿಕೆ ಕೊಡಿಸಿದ್ದಾರೆ. ಯಡಿಯೂರಪ್ಪ ಅವರು ದೂರುವುದರಲ್ಲಿ ಅರ್ಥ ಇಲ್ಲ” ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!