Friday, November 20, 2026

ಪ್ರಾಯೋಗಿಕ ಆವೃತ್ತಿ

ಜೆಡಿಎಸ್ ಗೆ ತಮ್ಮಯ್ಯ ರಾಜೀನಾಮೆ

ನಾಗಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್‌ಗೌಡ ಅವರ ನಿರ್ಲಕ್ಷ್ಯ ಮತ್ತು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಪತ್ರ ಸಲ್ಲಿಸುತ್ತಿರುವುದಾಗಿ ಚಿಕ್ಕೋನಹಳ್ಳಿ ತಮ್ಮಯ್ಯ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಶಾಸಕ ಸುರೇಶ್‌ಗೌಡ ಅವರ ನಿರ್ಲಕ್ಷ್ಯತನ ಚಟುವಟಿಕೆಗಳಿಂದ ಹಾಗೂ ಜನರ ಸಮಸ್ಯೆ ಬಗೆ ಹರಿಸಲು ಮುಂದಾಗದ ಹಿನ್ನೆಲೆಯಲ್ಲಿ ಬೇಸತ್ತು ಜಿಲ್ಲಾಧ್ಯಕ್ಷ ಡಿ.ರಮೇಶ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸುತ್ತಿರುವುದಾಗಿ ಹೇಳಿದರು.

ಮುಂದಿನ ದಿನಗಳಲ್ಲಿ ತಮ್ಮ ಬೆಂಬಲಿಗರು ಮತ್ತು ಕಾರ್ಯಕರ್ತರೊಟ್ಟಿಗೆ ಚರ್ಚಿಸಿ ಪಕ್ಷ ಸೇರ್ಪಡೆ ಸಂಬಂಧ ತೀರ್ಮಾನ ಕೈಗೊಳ್ಳಲಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ