Friday, November 20, 2026

ಪ್ರಾಯೋಗಿಕ ಆವೃತ್ತಿ

ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ನಿರ್ಬಂಧ : ಮಂಡ್ಯದಲ್ಲಿ ಕಟ್ಟುನಿಟ್ಟಿನ ಆದೇಶ ಪಾಲನೆಗೆ ಆಗ್ರಹ

ಸರ್ಕಾರಿ ಸ್ಥಳಗಳು ಸೇರಿದಂತೆ ಸಾರ್ವಜನಿಕ ರಸ್ತೆ, ಮೈದಾನ, ಆವರಣಗಳಲ್ಲಿ ಆರ್​ಎಸ್​ಎಸ್​ ಸೇರಿದಂತೆ ಇತರೆ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಇತ್ತೀಚೆಗೆ ನಿರ್ಬಂಧಿ, ಹಾಗೇ ನಡೆಸಯವಯದಾದರೆ ಸರ್ಕಾರದ ಅನುಮತಿ ಪಡೆದು ನಡೆಸುವಂತೆ ಇತ್ತಿಚೇಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಈ ಆದೇಶವನ್ನು ಮಂಡ್ಯ ಜಿಲ್ಲೆಯಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಾಗೃತ ಕರ್ನಾಟಕ ಒತ್ತಾಯಿಸಿದೆ.

ಈ ಸಂಬಂಧ ಮಂಡ್ಯ ಜಿಲ್ಲಾ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿಯವರನ್ನು ಭೇಟಿ ಮಾಡಿದ ಜಾಗೃತ ಕರ್ನಾಟಕ ಮುಖಂಡರು, ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಡೆಸುವುದಕ್ಕೆ ಸರ್ಕಾರದ ಪೂರ್ವಾನುಮತಿ ಕಡ್ಡಾಯವಾಗಿದೆ. ಆದರೆ ಜಿಲ್ಲೆಯಲ್ಲಿ ಅಲ್ಲಲ್ಲಿ ಆರ್ ಎಸ್ ಎಸ್ ತನ್ನ ಚಟುವಟಿಕೆಯನ್ನು ನಡೆಸುತ್ತಿತ್ತು. ಇದಕ್ಕೆ ಸಂಬಂಧಿಸಿದ ಇಲಾಖೆಗಳು ಅನುಮತಿ ನೀಡಲಾಗಿದೆಯೇ ? ಎಂಬುದರ ಬಗ್ಗೆ ಪರಿಶೀಲಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡುವಾಗ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಒತ್ತಾಯಿಸಿದರು.

ಸಂವಿಧಾನದ ರಕ್ಷಣಾ ಮೆರವಣಿಗೆಗೆ ಅನುಮತಿ ನೀಡಲು ಮನವಿ

ಜಾಗೃತ ಕರ್ನಾಟಕದ ವತಿಯಿಂದ ಸಂವಿಧಾನದ ರಕ್ಷಣೆಗೆ ಆಗ್ರಹಿಸಿ ದಂಡ, ಅಂಬೇಡ್ಕರ್ ಭಾವಚಿತ್ರ ಮತ್ತು ಸಂವಿಧಾನ ಪೀಠಿಕೆ ಹಿಡಿದು ಮಂಡ್ಯದ ಸಿಲ್ವರ್ ಜ್ಯುಬಿಲಿ ಉದ್ಯಾನವನದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಅಂಬೇಡ್ಕರ್ ಪ್ರತಿಮೆ ವರೆಗೂ ಮೆರವಣಿಗೆ ನಡೆಸಲು ಉದ್ದೇಶಿಸಿದ್ದು, ಇದಕ್ಕೆ ಮಂಡ್ಯ ಜಿಲ್ಲಾಡಳಿತ ಅನುಮತಿ ನೀಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಕೆರಗೋಡು ಗುರುಪ್ರಸಾದ್, ನ್ಯಾಯವಾದಿಗಳಾದ ಬಿ.ಟಿ.ವಿಶ್ವನಾಥ್, ಸುಂಡಹಳ್ಳಿ ಮಂಜುನಾಥ್, ಜಾಗೃತ ಕರ್ನಾಟಕದ ಸಂಚಾಲಕರಾದ ಎನ್.ನಾಗೇಶ್, ಸಂತೋಷ್ ಜಿ, ಕೃ‍ಷ್ಣಪ್ರಕಾಶ್, ನಗರಕೆರೆ ಜಗದೀಶ್, ಮಹಿಳಾ ಮುನ್ನಡೆಯ ಶಿಲ್ಪಾ ಸೇರಿದಂತೆ  ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ