Saturday, May 18, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಶಾಲೆ – ಕಾಲೇಜು ಆವರಣದಲ್ಲಿ ಆರೆಸ್ಸೆಸ್‌ ಚಟುವಟಿಕೆಗೆ ನಿರ್ಬಂಧ : ಕಾಂಗ್ರೆಸ್ ವಿಮರ್ಶೆ

ಕೇರಳದಲ್ಲಿ ದೇವಾಲಯಗಳ ಆವರಣದಲ್ಲಿ ಆರ್ ಎಸ್ ಎಸ್ ಹಾಗೂ ಬಜರಂಗ ದಳಗಳ ಕಾರ್ಯಚಟುವಟಿಕೆಗೆ ಅಲ್ಲಿನ ಸರ್ಕಾರ ತಡೆ ಹಾಕಿ ಆದೇಶ ಹೊರಡಿಸಿದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಕೂಡ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲಾ – ಕಾಲೇಜುಗಳಲ್ಲಿ ಆರ್ ಎಸ್ ಎಸ್ ಚುಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ ನಿಮರ್ಶೆ ನಡೆಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.

“>

ಆರ್ ಎಸ್ ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂಬ ನಳಿನ್ ಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್, ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ಪ್ರತಿಕ್ರಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!