Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ನಿವೃತ್ತ ನೌಕರರ ರಾಜ್ಯಮಟ್ಟದ ಕಾರ್ಯಾಗಾರ : ಶಿವಲಿಂಗಯ್ಯ

ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ವತಿಯಿಂದ ಏಪ್ರಿಲ್ 4ರಂದು ರಾಜ್ಯ ಮಟ್ಟದ ಕಾರ್ಯಾಗಾರ ಮತ್ತು ಸಮಾವೇಶ ಕಾರ್ಯಕ್ರಮವನ್ನು ಬೆಂಗಳೂರಿನ ಪ್ರಿನ್ಸ್ ಶೈನ್ ಅರಮನೆ ಮೈದಾನದ ಆವರಣದಲ್ಲಿ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸರ್ಕಾರಿ ನಿವೃತ್ತ ನೌಕರರು ಭಾಗವಹಿಸುವಂತೆ ಜಿಲ್ಲಾ ಸಂಘದ ಅಧ್ಯಕ್ಷ ಕೆ.ಬಿ.ಶಿವಲಿಂಗಯ್ಯ ಮನವಿ ಮಾಡಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸಚಿವ ಸಂಪುಟದ ಇತರೆ ಸಚಿವರು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ನಿವೃತ್ತ ನೌಕರರ ಬೇಡಿಕೆಗಳಾದ ನಗದು ರಹಿತ ಆರೋಗ್ಯ ಭಾಗ್ಯದ ಸಂಧ್ಯಾ ಕಿರಣ ಯೋಜನೆ ಅನುಷ್ಟಾನ, 70ರಿಂದ 80 ವರ್ಷ ದೊಳಗಿನ ನಿವೃತ್ತ ನೌಕರರು ಅವರ ಕುಟುಂಬದವರಿಗೆ ಶೇ.10 ರಷ್ಟು ಪಿಂಚಣಿ ಆರ್ಥಿಕ ಸೌಲಭ್ಯ, 2022ರಿಂದ 2024ರವರೆಗೆ ನಿವೃತ್ತಿ ಹೊಂದಿದವರಿಗೆ ಪಿಂಚಣಿ ಆರ್ಥಿಕ ಸೌಲಭ್ಯ ಒದಗಿಸುವುದು, ನಿವೇಶನ ಜಿಲ್ಲಾ ಹಾಗೂ ತಾಲೂಕು ಸಂಘಗಳಿಗೆ ಉಚಿತ ನಿವೇಶನ ಒದಗಿಸುವುದು, 7ನೇ ವೇತನ ಆಯೋಗದ ಶಿಫಾರಸ್ಸಿನ ಅಂಶಗಳನ್ನು ಯಥಾವತ್ತಾಗಿ ಜಾರಿಗೊಳಿಸುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಮಂಡ್ಯ ಜಿಲ್ಲೆಯಿಂದ 8 ಬಸ್‌ಗಳಲ್ಲಿ 400 ರಿಂದ 500 ಮಂದಿ ಸರ್ಕಾರಿ ನಿವೃತ್ತ ನೌಕರರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

ಗೋಷ್ಠಿಯಲ್ಲಿ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಗೌಡ, ಅಂಕೇಗೌಡ, ಬಿ.ಶಿವಲಿಂಗು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ