Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಕೆಂಬೂತಗೆರೆಯಲ್ಲಿ ಕಂದಾಯ ಇಲಾಖೆಯಿಂದ ಒತ್ತುವರಿ ತೆರವು

ಮಳವಳ್ಳಿ ತಾಲೂಕಿನ ಕೆಂಬೂತಗೆರೆ ಗ್ರಾಮದ ಸರ್ವೆ ನಂ.106 ರಿಂದ 192ರವರೆಗೆ ಒತ್ತುವರಿಯಾಗಿದ್ದ ಸರ್ಕಾರಿ ಹಳ್ಳವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತೆರವುಗೊಳಿಸಿದರು.

ಗ್ರಾಮದ ಸರ್ವೆ ನಂ.156ರಿಂದ ಕೆರೆಯ ಕೋಡಿ ಹಳ್ಳವು ಸರ್ವೆ ನಂ.185ರಿಂದ 192ರವರೆಗೆ ಹಾಗೂ 105ರಿಂದ 107ರವರೆಗೆ ಹಾದು ಹೋಗಿತ್ತು. ಈ ಮಧ್ಯೆ ಕಳೆದ ಹಲವು ವರ್ಷಗಳಿಮದ ಕೆಲವರು ಒತ್ತುವರಿ ಮಾಡಿಕೊಂಡಿದ್ದರು. ಹೀಗಾಗಿ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಗ್ರಾಮಸ್ಥರು ತಹಶೀಲ್ದಾರ್ ಎಸ್.ವಿ.ಲೋಕೇಶ್ ಅವರಿಗೆ ಮನವಿ ಸಲ್ಲಿಸಿದ್ದರು.

ಹೀಗಾಗಿ ಗುರುವಾರ ಗ್ರಾಮಾಂತರ ಪೊಲೀಸರ ಸಮ್ಮುಖದಲ್ಲಿ ರಾಜಸ್ವ ನೀರಿಕ್ಷಕ ಎಂ.ಪಿ.ರವಿಕುಮಾರ್ ಹಾಗೂ ತಾಲ್ಲೂಕು ಸರ್ವೆಯರ್ ಎಂ.ಎಸ್.ಬೀರೇಶ್ ನೇತೃತ್ವದಲ್ಲಿ ಗುರುವಾರ ಸರ್ವೆ ಕಾರ್ಯ ಮಾಡಿದ ಅಧಿಕಾರಿಗಳು ಒತ್ತುವರಿಯಾಗಿದ್ದ ಹಳ್ಳವನ್ನು ತೆರವುಗೊಳಿಸಿದರು. ಸುಮಾರು ಒಂದು ಎಕರೆಯಷ್ಟು ಸರ್ಕಾರಿ ಜಾಗವನ್ನು ವಶಕ್ಕೆ ಪಡೆಯಲಾಯಿತು.

ರಾಜಸ್ವ ನೀರಿಕ್ಷಕ ಎಂ.ಪಿ.ರವಿಕುಮಾರ್ ಮಾತನಾಡಿ, ಗ್ರಾಮಸ್ಥರ ದೂರಿನ ಮೇರೆಗೆ ಸರ್ವೆ ಅಧಿಕಾರಿಗಳೊಂದಿಗೆ ಭೇಟಿ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದವು. ತಹಶೀಲ್ದಾರ್ ಅವರ ಆದೇಶದಂತೆ ಒತ್ತುವರಿಯಾಗಿದ್ದ ಸುಮಾರು 1 ಎಕರೆಯಷ್ಟು ಸರ್ಕಾರಿ ಹಳ್ಳವನ್ನು ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಹತ್ತಾರು ವರ್ಷಗಳಿಂದ ಒತ್ತುವರಿಯಾಗಿದ್ದ ಸರ್ಕಾರಿ ಹಳ್ಳದ ತೆರವಿನಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ಗ್ರಾಮದ ಮುಖಂಡರಾದ ಜಯರಾಮು, ಸಿಂಪ್ರೇಗೌಡ, ನಾಗೇಗೌಡ, ಎಚ್.ಸಿ.ಚಿಕ್ಕಣ್ಣಗೌಡ, ಮನುಕುಮಾರ್, ನಾಗರಾಜು ತಿಳಿಸಿದರು. ಗ್ರಾಮಾಂತರ ಪೊಲೀಸರು ಭದ್ರತೆ ಕಲ್ಪಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ