Friday, September 20, 2024

ಪ್ರಾಯೋಗಿಕ ಆವೃತ್ತಿ

ಮತದಾರರ ಪಟ್ಟಿ ಪರಿಷ್ಕರಣೆ: ಸ್ವೀಪ್ ನೋಡಲ್ ಅಧಿಕಾರಿಗಳಿಂದ ಪರಿಶೀಲನೆ

ರಾಜ್ಯ ಸ್ವೀಪ್‌ ನೋಡಲ್‌ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು, ಇಂದು ಮಂಡ್ಯ ಜಿಲ್ಲಾ ವ್ಯಾಪ್ತಿಯ ಶ್ರೀರಂಗಪಟ್ಟಣ, ಮೇಲುಕೋಟೆ ಹಾಗೂ ಕೃಷ್ಣರಾಜಪೇಟೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಸಂಬಂಧ ಮತದಾರರನ್ನು ಖುದ್ದು ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಕುರಿತಂತೆ ಚರ್ಚಿಸಿದರು. 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಪ್ರೇರೆಪಿಸಿ ಎಂದರು

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾದ ಡಾ. ಕುಮಾರ ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್‌ ತನ್ವೀರ್‌ ಆಸಿಫ್‌ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!