Tuesday, November 17, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ : ಜೂ.10ಕ್ಕೆ ಪ್ರತಿಭಾನ್ವಿತ ಎಸೆಸ್ಸೆಲ್ಸಿ- ಪಿಯುಸಿ ವಿದ್ಯಾರ್ಥಿಗಳಿಗೆ ಪುರಸ್ಕಾರ

ಮಳವಳ್ಳಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ವತಿಯಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 10 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಶಿಕ್ಷಣಾಸಕ್ತ ಹಾಗೂ ಸಮಾಜ ಸೇವಕ ಟಿ.ಎಂ ಪ್ರಕಾಶ್ ತಿಳಿಸಿದರು.

ಮಳವಳ್ಳಿ ಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್ ಸಿಯಲ್ಲಿ ಶೇ.90 ಹಾಗೂ ಪಿಯುಸಿಯಲ್ಲಿ ಶೇ 85ರಷ್ಟು ಅಂಕ ಪಡೆದ ಮಳವಳ್ಳಿ ತಾಲ್ಲೂಕಿನ ಎಲ್ಲಾ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗದು ಹಾಗೂ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದೆ, ಅಹ೯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು, ಈಗಗಲೇ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುತ್ತಾರೆಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ, ಮಳವಳ್ಳಿ ತಾಲ್ಲೂಕಿನವರೇ ಆಗಿದ್ದು, ಬೇರೆ ಜಿಲ್ಲೆ ಅಥವಾ ತಾಲ್ಲೂಕಿನಲ್ಲಿ ಓದಿದರೂ ಕೂಡ ಪ್ರತಿಭಾ ಪುರಸ್ಕಾರವನ್ನು ಸ್ವೀಕರಿಬಹುದಾಗಿದೆ ಎಂದರು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಕಾಯ೯ಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ದಡದಪುರ ಶಿವಣ್ಣ ವಹಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆಂದು ಹೇಳಿದರು.

ರಾಮಲೋಹಿಯಾ ವಿಚಾರ ವೇದಿಕೆ ವತಿಯಿಂದ ಎನ್‌ಎಂಎಂಎಸ್ ಪರೀಕ್ಷೆಗೆ ವಿದ್ಯಾರ್ಥಿಗಳು ತಯಾರಾಗಲು ಆಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಲಾಗಿತ್ತು. ಇದರ ಪ್ರತಿಫಲವಾಗಿ ನಮ್ಮ ತಾಲ್ಲೂಕಿನ 119 ವಿದ್ಯಾರ್ಥಿಗಳು ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿಯೂ ಕೂಡ ತಾಲ್ಲೂಕಿಗೆ ಉತ್ತಮ ಫಲಿತಾಂಶ ಬಂದಿದೆ. ಉತ್ತಮ ಅಂಕಗಳಿಸಿ ತಾಲ್ಲೂಕಿನಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಹಾಗೂ ಸಹಕಾರ ನೀಡಿದ ಶಿಕ್ಷಕರು, ಪೋಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ತಿಳಿಸಿದರು.

ಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಸಂಘದ ಅಧ್ಯಕ್ಷ ಶಿವರಾಜ್ ನಾಯಕ್ , ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ