2023 ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ಅಂಕ ಪಡೆದ 17 ಮಂದಿ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೈಯಕ್ತಿಕವಾಗಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಿದರು.
ನಂತರ ಮಾತನಾಡಿದ ಅವರು ಜಿಲ್ಲಾಧಿಕಾರಿ, ಕಚೇರಿಗೆ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಇಲ್ಲಿನ ಪರಿಸರ ಹಾಗೂ ಕಚೇರಿ ವಾತಾವರಣ ತೋರಿಸಿ ಮುಂದಿನ ದಿನಗಳಲ್ಲಿ ಅವರು ಶಿಕ್ಷಣದಲ್ಲಿ ಉತ್ತಮವಾದ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.
ಪೋಷಕರು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ನೀಡಿ, ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಜೀವನದಲ್ಲೂ ಉನ್ನತ ಸಾಧನೆ ಮಾಡುವಂತಾಗಲಿ ಎಂದರು.
ಇದೇ ಸಂದರ್ಭದಲ್ಲಿ ಮಾಂಡವ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾರಾಣಿ, ಹೃತ್ವಿಕ್, ಸದ್ವಿದ್ಯಾ ಪದವಿಪೂರ್ವ ಕಾಲೇಜಿನ ಸ್ಪಟಿಕ, ದೀಪ್ತಿಶ್ರೀ, ಫಾತಿಮಾ ಆಲಿ ಸಯದ್, ದಿಗಂತ್, ಪ್ರಚೀತ, ಚಿನಕುರಳಿ ಎಸ್‌ಟಿಜಿ ಪದವಿ ಪೂರ್ವ ಕಾಲೇಜಿನ ಲಕ್ಷ್ಮಿ, ನಾಗಮಂಗಲ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ಸುಪ್ರಿಯ, ಕಲ್ಲು ಕಟ್ಟಡ ಪದವಿ ಪೂರ್ವ ಕಾಲೇಜಿನ ಕೃಷ್ಣವೇಣಿ, ಬಸರಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮಂಜುನಾಥ್, ಆಶೀರ್ವಾದ ಆಂಗ್ಲ ಮಾಧ್ಯಮ ಶಾಲೆಯ ಮೋಕ್ಷ ಲಕ್ಷ್ಮಿ, ಜೆಜೆ ಪಬ್ಲಿಕ್ ಸ್ಕೂಲ್ ಪುಣ್ಯಶ್ರೀ, ನ್ಯೂ ಆಕ್ಸ್ ವರ್ಡ್ ಸ್ಕೂಲು ಕುಶಿಕ ಆದರ್ಶ, ಕಿತ್ತೂರು ರಾಣಿ ಚೆನ್ನಮ್ಮ ರೆಸಿಡೆನ್ಸಿ ಸ್ಕೂಲ್ ಅರ್ಚನಾ, ಮಾರ ಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆ ವಿನಂತಿ ಮನೋಹರಿ, ಸೇಂಟ್ ಜೋಸೆಫ್ ಸ್ಕೂಲ್, ರಶ್ಮಿತಾ ಅವರಿಗೆ ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ ಅವರು ವೈಯಕ್ತಿಕವಾಗಿ ನಗದು ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜವರೇಗೌಡ, ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ರಂಗಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು




