Thursday, September 19, 2024

ಪ್ರಾಯೋಗಿಕ ಆವೃತ್ತಿ

ಪರಿಸರ ರಕ್ಷಿಸದಿದ್ದರೆ ಅಪಾಯ

ಪರಿಸರ ರಕ್ಷಣೆ ಮಾಡದಿದ್ದರೆ ಭಾರೀ ಅಪಾಯ ಕಾದಿದೆ ಎಂದು ನೆಹರು ಯುವ ಕೇಂದ್ರದ ಹರ್ಷ ತಿಳಿಸಿದರು.

ಮಂಡ್ಯ ತಾಲ್ಲೂಕಿನ ಬಿಳಿದೇಗಲು ಗ್ರಾಮದ ಭೈರವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಮಂಡ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಡ್ಯ ಹಾಗೂ ಶ್ರೀ ಭೈರವೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದಚಿಕ್ಕ ಬೈರೇಗೌಡ, ಸೂನಗನ ಹಳ್ಳಿ ಪುಟ್ಟಸ್ವಾಮಿ, ನೆಹರು ಯುವ ಕೇಂದ್ರದ ಹರ್ಷ ರವರು ಕಾಲೇಜಿನ ಉಪನ್ಯಾಸಕ ವರ್ಗದವರು ಗಿಡ ನೆಡುವುದರ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.

ನಂತರ ನೆಹರು ಯುವ ಕೇಂದ್ರ ಹರ್ಷ ಅವರು ಮಾತನಾಡಿ,ಮುಂಬರುವ ದಿನಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ತಮ್ಮ ಗ್ರಾಮಗಳಲ್ಲಿ, ತಮ್ಮ ಕಾಲೇಜುಗಳಲ್ಲಿ ಅತಿ ಹೆಚ್ಚು ಗಿಡಗಳನ್ನು ನಡೆಸುವುದರ ಮೂಲಕ ಹಸಿರು ಕ್ರಾಂತಿಯಲ್ಲಿ ಪಾಲ್ಗೊಳ್ಳಬೇಕು. ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ಎದುರಾಗಲಿದ್ದು ಅತಿ ಹೆಚ್ಚು ಗಿಡಗಳನ್ನು ಬೆಳೆಸುವುದರ ಮೂಲಕ ಉತ್ತಮ ಗಾಳಿಯನ್ನು ಸೇವಿಸಬಹುದು ಎಂದರು.

ಕೋವಿಡ್ ಸಾಂಕ್ರಾಮಿಕ ರೋಗ ಮನುಕುಲವನ್ನು ಕಾಡಿದ ಸಂದರ್ಭದಲ್ಲಿ ಆಮ್ಲಜನಕದ ಕೊರತೆ ಎದುರಾಗಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಆ ಕಷ್ಟವನ್ನು ಅನುಭವಿಸಿದ್ದೇವೆ. ಭವಿಷ್ಯದ ಸಮಾಜವು ಆರೋಗ್ಯವಾಗಿರಬೇಕಾದರೆ ಪ್ರಕೃತಿ ರಕ್ಷಣೆ ನಮ್ಮೆಲ್ಲರ ಗುರಿಯಾಗಬೇಕು ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!