Wednesday, May 15, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ : 3 ವರ್ಷಗಳಲ್ಲಿ 5,617 ರಸ್ತೆ ಅಪಘಾತ : 1260 ಮಂದಿ ಸಾವು

ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ (2020-2023 ಜನವರಿ ಅಂತ್ಯಕ್ಕೆ) ಒಟ್ಟು 2,24,732 ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳು ವರದಿಯಾಗಿದ್ದು, ಈ ಅವಧಿಯಲ್ಲಿ ಒಟ್ಟು 8,92,68,100 ರೂಪಾಯಿಗಳನ್ನು ದಂಡದ ರೂಪದಲ್ಲಿ ವಸೂಲಾತಿ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರ ಅವರ ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಈ ಅವಧಿಯಲ್ಲಿ ಸಂಭವಿಸಿದ ಒಟ್ಟು 5,617 ರಸ್ತೆ ಅಪಘಾತಗಳಲ್ಲಿ 1,260 ಮಂದಿ ಮೃತಪಟ್ಟಿದ್ದಾರೆ ಎಂದಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆಗಾಗಿ ಸ್ಥಳ ದಂಡವನ್ನು ವಿಧಿಸಲು ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆ ಹಾಗೂ ಮೇಲ್ಪಟ್ಟ ಸಂಚಾರ ಅಧಿಕಾರಿಗಳಿಗೆ ಮಾತ್ರ ಅಧಿಕಾರಿ ಇದೆ. ಈ ದರ್ಜೆಗಿಂತ ಕಡಿಮೆಯಿರುವವರು ದಂಡ ವಿಧಿಸುವ ಅಧಿಕಾರಿ ಇರುವುದಿಲ್ಲ ಎಂದು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!