Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | 4 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕರ ಭೂಮಿಪೂಜೆ

ಮಂಡ್ಯ ವಿಧಾನಸಭಾ ಕ್ಷೇತ್ರದ ಶಿವಪುರ ಗ್ರಾಮದಿಂದ ಮಾಚಗೌಡನಹಳ್ಳಿ ಹಾಗೂ ಗಣಿಗ ಗ್ರಾಮದಿಂದ ಜಿ.ಬೊಮ್ಮನಹಳ್ಳಿ ರಸ್ತೆ ಮತ್ತು ಗಣಿಗ ಸೋಮನಹಳ್ಳಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ರವಿಕುಮಾರ್ ಗಣಿಗ ಶುಕ್ರವಾರ ಭೂಮಿಪೂಜೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ ಸಾವಿರಾರು ಕೋಟಿ ರೂ.ಗಳ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದೆಂದೂ ಈ ಕ್ಷೇತ್ರದಲ್ಲಿ ಇಂತಹ ಅಭಿವೃದ್ದಿ ಕೆಲಸಗಳು ನಡೆದಿರದಲಿಲ್ಲ. ಬಸರಾಳು ಹೋಬಳಿಯೊಂದಲ್ಲೆ 150 ಕೋಟಿ ರೂ. ಗೂ ಹೆಚ್ಚು ಕಾಮಗಾರಿಗಳು ನಡೆಯುತ್ತಿವೆ ಎಂದರು.

ಈ ಭಾಗದಲ್ಲಿ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣಕ್ಕಾಗಿ ಅಂದಾಜು ವೆಚ್ಚ 4 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ.ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಕಾಂಗ್ರೆಸ್ ಮುಖಂಡ ಶಿವಪುರ ಅಶೋಕ್‌ ಮತ್ತಿತರರಿದ್ದರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ