ನಿಯಂತ್ರಣ ತಪ್ಪಿದ ಬೈಕ್ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ದಂಪತಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಸಂಜೆ 5.30 ಸುಮಾರಿಗೆ ಮಂಡ್ಯ ತಾಲ್ಲೂಕಿನ ಇಂಡುವಾಳು ಬಳಿ ನಡೆದಿದೆ.
ಮೈಸೂರು- ಬೆಂಗಳೂರು ಹೆದ್ದಾರಿಯ ಇಂಡುವಾಳು ಬಳಿ ಮೈಸೂರು ಕಡೆಯಿಂದ ವೇಗವಾಗಿ ಬಂದ ಬೈಕ್ ಸವಾರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ದಂಪತಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಮೂಲದವರೆನ್ನಲಾದ ದಂಪತಿ ಸಾವನ್ನಪ್ಪಿದ್ದು, ಹೆಸರು ವಿವರ ತಿಳಿದು ಬಂದಿಲ್ಲ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಸೆಂಟ್ರಲ್ ಪೊಲೀಸ್ ಠಾಣೆಯ ಪಿಎಸ್‌ಐ ದೀಕ್ಷಿತ್ ಮತ್ತು ಪಶ್ಚಿಮ ಠಾಣೆಯ ಪಿಎಸ್ಐ ಅರುಣ್ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ, ಶವಗಳನ್ನು ಮಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು.
ಈ ಸಂಬಂಧ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.




