Wednesday, November 18, 2026

ಪ್ರಾಯೋಗಿಕ ಆವೃತ್ತಿ

ಕಾವೇರಿ ವಿವಾದ| ಸರ್ಕಾರದ ಸ್ಪಷ್ಟ ನಿಲುವಿಗೆ ಆಗ್ರಹಿಸಿ ರಸ್ತೆತಡೆ

ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂಬ ದೃಢ ನಿರ್ಧಾರ ಮಾಡುವ ಬದಲು, ಕಾನೂನು ತಜ್ಞರ ಜೊತೆ ಮಾತುಕತೆ ನಡೆಸಿ ನೀರು ಬಿಡುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದೆಂದು ಹೇಳಿರುವುದು ಕಾವೇರಿ ಕೊಳ್ಳದ ರೈತರಿಗೆ ಮಾಡಿದ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿಯು ಮಂಡ್ಯದಲ್ಲಿ ರಸ್ತೆತಡೆ  ಗುರುವಾರ ರಸ್ತೆತಡೆ ನಡೆಸಿತು.

ಮಂಡ್ಯ ನಗರದಲ್ಲಿ ಹೋರಾಟ ನಡೆಸುತ್ತಿರುವ ಸಮಿತಿಯ ಮುಖಂಡರು ರಸ್ತೆತಡೆ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಕೇಂದ್ರ ಸರ್ಕಾರ ಹಾಗೂ ಮಂಡ್ಯ ಜಿಲ್ಲೆಯ ಶಾಸಕರು, ಸಂಸದರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯೂ ಸೆಕ್ ನೀರು ಬಿಡುಗಡೆ ಮಾಡಬೇಕೆಂದು ಸೂಚಿಸಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಹೋರಾಟಗಾರರಿಗೆ ಮಾತು ಕೊಟ್ಟಿತ್ತು, ಈ ಮಾತಿಗೆ ಸರ್ಕಾರ ಬದ್ದವಾಗಿರಲಿ ಎಂದು ಆಗ್ರಹಿಸಿದರು.

ಕೆ ಆರ್ ಎಸ್ ನಲ್ಲಿ ನೀರಿನ ಮಟ್ಟ 97 ಅಡಿಗೆ ಕುಸಿದಿದೆ, ಕುಡಿಯಲು ಸಹ ನೀರು ಸಾಕಾಗುವುದಿಲ್ಲ, ಇಂತಹ ಸಮಯದಲ್ಲಿ ನೀರು ಬಿಟ್ಟರೆ, ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆ ಎಂದ ಪ್ರತಿಭಟನಾಕಾರರು, ಸುಪ್ರೀಂ ಕೋರ್ಟ್ ನಲ್ಲಿ ಸೆ. 21 ರಂದು ನಡೆಯುವ ವಿಚಾರಣೆ ವೇಳೆ ಕಾವೇರಿ ಕೊಳ್ಳದ ಪ್ರದೇಶದಲ್ಲಿರುವ ಜಲಾಶಯಗಳ ವಾಸ್ತವ ಪರಿಸ್ಥಿತಿ ಕುರಿತು ಸಮರ್ಥ ವಾದ ಮಾಡುವ ಮೂಲಕ ರೈತರ ಕಾಪಾಡಲು ಮುಂದಾಗಬೇಕಾಗಿದೆ ಎಂದು ಒತ್ತಾಯಿಸಿದರು.

ರಸ್ತೆತಡೆಯಲ್ಲಿ ರೈತರು, ಕನ್ನಡ, ಪ್ರಗತಿಪರ ಹಾಗೂ ವಿವಿಧ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು. ರೈತ ಹಿತರಕ್ಷಣಾ ಸಮಿತಿಯ ಮುಖಂಡರಾದ ಸುನಂದ ಜಯರಾಂ, ಕೆ.ಬೋರಯ್ಯ, ಮಾಜಿ ಶಾಸಕ ಕೆ ಟಿ ಶ್ರೀಕಂಠೇಗೌಡ, ರೈತಸಂಘದ ಇಂಡವಾಳು ಚಂದ್ರಶೇಖರ್, ಮುದ್ದೇಗೌಡ, ಕೀಲಾರ ಕೃಷ್ಣ, ಮೈ ಶುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ. ಕನ್ನಡಸೇನೆ ಮಂಜುನಾಥ್, ದಸಂಸ ಎಂ.ವಿ ಕೃಷ್ಣ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ