Sunday, May 19, 2024

ಪ್ರಾಯೋಗಿಕ ಆವೃತ್ತಿ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಡಿ.ಸಿ. ತಮ್ಮಣ್ಣ

ವರದಿ : ಪ್ರಭು ವಿ.ಎಸ್.

ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ಸುಮಾರು 100 ಕೋಟಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದಾಗಿ ಶಾಸಕ ಡಿ.ಸಿ. ತಮ್ಮಣ್ಣ ತಿಳಿಸಿದರು.

ಮದ್ದೂರು ತಾಲೂಕಿನ ಸಾದೊಳಲು ಗ್ರಾಮದಲ್ಲಿ 75 ಲಕ್ಷ.ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ತಾಲೂಕಿನ ನಗರಕೆರೆ, ಅಡಗನಹಳ್ಳಿ, ಕೆಸ್ತೂರು, ಬೆಸಗರಹಳ್ಳಿ, ಚಾಮನಹಳ್ಳಿ, ಮಾಲಗಾರನಹಳ್ಳಿ, ಚಿಕ್ಕಅರಸಿನಕೆರೆ ಇನ್ನಿತರೆ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಶಾಲಾ ಕಾಲೇಜು ನಿರ್ಮಾಣಕ್ಕೂ ಚಾಲನೆ ನೀಡಿರುವುದಾಗಿ ಹೇಳಿದರು.

ಕಳೆದ ಹಲವಾರು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಜಮೀನುಗಳಿಗೆ ತೆರಳುವ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಅನುದಾನ ಬಿಡುಗಡೆಗೊಳಿಸಿದ್ದು ಮತ್ತು ಕ್ಷೇತ್ರದ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಪ್ರತಿ ಹೋಬಳಿ ವ್ಯಾಪ್ತಿಯಲ್ಲಿ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿರುವುದಾಗಿ ತಿಳಿಸಿದರು.

ತಾವು ವಿರೋಧ ಪಕ್ಷದಲ್ಲಿದ್ದರೂ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಅನುದಾನವನ್ನು ತಂದು ಮಾದರಿ ಕ್ಷೇತ್ರವನ್ನಾಗಿಸಲು ಪಣತೊಟ್ಟಿದ್ದು ಸಂಬಂಧಿಸಿದ ಸಚಿವರನ್ನು ಕಾಡಿಬೇಡಿ ಅನುದಾನವನ್ನು ತಂದು ಶಾಶ್ವತ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಉದಾಹರಣೆಗಳು ಸಾಕಷ್ಟಿದ್ದು ಕೆಲ ವ್ಯಕ್ತಿಗಳು ತಮ್ಮ ವಿರುದ್ಧ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದು ಅವರಿಗೆ ಅಭಿವೃದ್ಧಿ ಕಾರ್ಯಗಳು ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಕೆಸ್ತೂರು ಜಿ.ಪಂ. ವ್ಯಾಪ್ತಿಯ ಪ್ರತಿ ಗ್ರಾಮದ ಕೆರೆಗಳಿಗೂ ನೀರು ತುಂಬಿಸುವ ಯೋಜನೆ ಪೂರ್ಣಗೊಂಡಿದ್ದು ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ ಬಾಗಿಲಿಗೆ ಶುದ್ಧ ಕುಡಿಯುವ ನೀರು ಪೂರೈಸಿ, ಏತ ನೀರಾವರು ಪುನಶ್ಚೇತನ, ನಾಲೆಗಳ ಆಧುನೀಕರಣ, ಕೆರೆಕಟ್ಟೆ ನಿರ್ಮಾಣ ಇನ್ನಿತರೆ ಅಭಿವೃದ್ಧಿ ಕಾರ್ಯಗಳಿಗೂ ವೇಗ ಕಲ್ಪಿಸಿದ್ದು ಮತ್ತೊಮ್ಮೆ ತಮಗೆ ಅವಕಾಶ ಕಲ್ಪಿಸಿದಲ್ಲಿ ಸಾಕಷ್ಟು ಕನಸನ್ನು ಕಂಡಿದ್ದು ಅವನ್ನು ಪೂರ್ಣಗೊಳಿಸುವ ಸಂಕಲ್ಪ ತೊಟ್ಟಿರುವುದಾಗಿ ತಿಳಿಸಿದರು.

ಈ ವೇಳೆ ಮನ್‌ಮುಲ್ ಮಾಜಿ ನಿರ್ದೇಶಕ ಕೆ.ಎಂ. ಉಮೇಶ್, ಸ್ಥಳೀಯ ಮುಖಂಡರಾದ ಬಸವರಾಜು, ಭೂಮಿಕ ಬಸವರಾಜು, ಪುಟ್ಟಸ್ವಾಮಿ, ಸಿದ್ದೇಗೌಡ, ಶಿವರಾಮು, ಚಂದ್ರಶೇಖರ್, ಗುತ್ತಿಗೆದಾರ ಕೆಂಗಲ್‌ಗೌಡ, ಎಂಜಿನಿಯರ್ ಸುಕುಮಾರ್‌ನಾಯಕ್ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!