Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವಿಕುಮಾರ್ ಭೂಮಿಪೂಜೆ

ಮಂಡ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗೌಡ ಗಣಿಗ ಅವರು ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಸಾತನೂರು ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ, ಸಾರ್ವಜನಿಕರ ಅನುಕೂಲಕ್ಕಾಗಿ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಎಲ್ಲಾ ರಸ್ತೆಗಳು ಹಾಗೂ ನಾಲೆಗಳನ್ನು ಅಭಿವೃದ್ಧಿ ಮಾಡಿಸುತ್ತೇವೆ, ನಾಗರೀಕರು ಮಾಹಿತಿ ನೀಡಿದ್ದೀರಿ, ಅಭಿವೃದ್ಧಿ ಕಾರ್ಯದಲ್ಲಿ ಹೆಚ್ಚಿನ ಅನುದಾನ ಹಾಕುತ್ತೇನೆ. ಗ್ರಾಮದಲ್ಲಿ ನಡೆಯುವ ಕಾಮಗಾರಿಗಳನ್ನು ಗ್ರಾಮಸ್ಥರು ಗುಣಮಟ್ಟದಿಂದ ಇರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಾತನೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್, ಮುಖಂಡರಾದ ರವಿ, ಶಂಕರ್ ನಾರಾಯಣ್, ನರಸಪ್ಪಹೆಗಡೆ, ಬಾಬು, ಮಧು, ಸತೀಶ್, ಸುರೇಶ್, ಕೊಣಪ್ಪ ಮತ್ತಿತರರು ಇದ್ದರು,

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ