ವರದಿ: ಧರಣೇಶ್
ಮದ್ದೂರು ತಾಲೂಕಿನ ಕರಡಕೆರೆ ಗ್ರಾಮದಲ್ಲಿ 1.25 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ಸಿ. ತಮ್ಮಣ್ಣ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಡಿ.ಸಿ. ತಮ್ಮಣ್ಣ ಅವರು ಮಾತನಾಡಿ, ಕರಡಕೆರೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದಿಂದ ಅರೆಚಾಕನಹಳ್ಳಿ ಮಾರ್ಗದ ರಸ್ತೆಯನ್ನು ಅಭಿವೃದ್ದಿ ಪಡಿಸುವ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಗಿದೆ.
ಮದ್ದೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ಸದುದ್ದೇಶದಿಂದ ನಮ್ಮ ಸರ್ಕಾರ ಆಡಳಿತದಲ್ಲಿಲ್ಲದಿದ್ದರೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಹಾಗೂ ಸಚಿವರ ಮೇಲೆ ಒತ್ತಡ ಹಾಕಿ ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿರುವುದಾಗಿ ತಿಳಿಸಿದರು.
ಇದೇ ವೇಳೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಷ್ಮಾ ಶಂಕರೇಗೌಡ, ಮಾಜಿ ಉಪಾಧ್ಯಕ್ಷ ಬೊಮ್ಮೇಗೌಡ, ಮೈನಾವತಿ ಶಂಕರ್, ಯೋಗೇಶ್, ಜ್ಯೋತಿ ಶಂಕರೇಗೌಡ, ಗವಿಗೌಡ, ಸುಷ್ಮಾ ಶಂಕರೇಗೌಡ, ವಸಂತಮ್ಮ, ಚಂದ್ರಮ್ಮ, ಮೋಟೇಗೌಡ, ನಿಂಗೇಗೌಡ, ಗುತ್ತಿಗೆದಾರ ಚಂದ್ರು ಸೇರಿದಂತೆ ಇತರರಿದ್ದರು.




