Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಪಘಾತದಲ್ಲಿ ಸಾವಿಗೀಡಾದವರ ಕುಟುಂಬದವರಿಂದ ರಸ್ತೆ ಉದ್ಘಾಟನೆ

ಮಂಡ್ಯನಗರದ ಕಾರಿಮನೆ ಗೇಟ್‌ನಲ್ಲಿ ಗುಂಡಿ ಬಿದ್ದಿದ್ದ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ಯೋಧ ಹಾಗೂ ಚಿಕ್ಕಮಂಡ್ಯ ಗ್ರಾಮದ ಯುವಕನ ಸಾವಿಗೆ ಕಾರಣವಾಗಿದ್ದ ರಸ್ತೆಯನ್ನು ದುರಸ್ಥಿಪಡಿಸಲಾಗಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ರಸ್ತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಸಾವಿಗೀಡಾದ ಕುಟುಂಬ ವರ್ಗದವರಿಂದ ಉದ್ಘಾಟಿಸಲಾಯಿತು.

ಇದೇ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದ ಶಾಸಕರಾದ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ