Thursday, September 19, 2024

ಪ್ರಾಯೋಗಿಕ ಆವೃತ್ತಿ

ರಸ್ತೆ ಸುರಕ್ಷತೆ ಬಗ್ಗೆ ಜನ ಜಾಗೃತಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಮಂಡ್ಯದ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಶನಿವಾರ ಮಂಡ್ಯದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬಸ್ಸುಗಳಿಗೆ ಪೋಸ್ಟರ್ ಗಳನ್ನು ಅಂಟಿಸುವ ಮೂಲಕ ಸಾರ್ವಜನಿಕರಿಗೆ, ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳಿಗೆ ಹಾಗೂ ವಿಧ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆಎಸ್ಆರ್ ಟಿಸಿ ವಿಭಾಗೀಯ ನಿಯಂತ್ರಣಧಿಕಾರಿ ಎಸ್.ಪಿ. ನಾಗರಾಜ್ ಮಾತನಾಡಿ,ಬಸ್ ಚಲಿಸುವ ಸಂದರ್ಭದಲ್ಲಿ ಓಡಿ ಹೋಗಿ ಬಸ್ಸು ಹತ್ತುವುದು, ಪುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸುವುದನ್ನು ಮಾಡಬಾರದು.

ಅಪಘಾತವಾದ ಮೇಲೆ ಯೋಚನೆ ಮಾಡುವುದಕ್ಕಿಂತ ಅಪಘಾತಗಳನ್ನು ತಡೆಯುವುದು ಹೇಗೆ ಎಂದು ಯೋಚನೆ ಮಾಡಬೇಕು ಎಂದರು.
ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು.ಈ ಬಗ್ಗೆ ಸಾರಿಗೆ ಇಲಾಖೆಯಿಂದ ಬಸ್ ಗಳ ಮೇಲೆ ಪೋಸ್ಟ್‌ರ್ ಅಂಟಿಸಲಾಗಿದ್ದು,ಜನರು ರಸ್ತೆ ಸುರಕ್ಷತಾ ನಿಯಮ ಪಾಲಿಸಿ ದೇಶದ ಪ್ರಗತಿಗೆ ಕೈ ಜೋಡಿಸಬೇಕೆಂದು ತಿಳಿಸಿದರು.

ಆರ್ ಟಿ ಓ ಅಧಿಕಾರಿ ವಿವೇಕಾನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆಧೀಕ್ಷಕ ಮನೋಹರ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!