Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ರಸ್ತೆ ಕಾಮಗಾರಿಗೆ ನಿರ್ಮಲಾನಂದನಾಥಶ್ರೀ ಗುದ್ದಲಿ ಪೂಜೆ

ಮಂಡ್ಯ ತಾಲ್ಲೂಕಿನ ಕೊಮ್ಮೆರಹಳ್ಳಿ-ಚುಂಚನಗಿರಿ ಶಾಖಾ ಮಠ-ಸಾತನೂರು ಬೆಟ್ಟ – ಉಮ್ಮಡಹಳ್ಳಿ ಗೆ ಸಂಪರ್ಕ ಕಲ್ಪಿಸುವ ₹6 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮಿಜಿ ಇಂದು ಗುದ್ದಲಿ ಪೂಜೆ ನೆರವೇರಿಸಿದರು.

ಮಂಡ್ಯ ಕ್ಷೇತ್ರ ದ ಕೊಮ್ಮೆರಹಳ್ಳಿ-ಆದಿಚುಂಚನಗಿರಿ ಶಾಖಾ ಮಠ-ಸಾತನೂರು ಬೆಟ್ಟ-ಉಮ್ಮಡಹಳ್ಳಿ ಗೆ ಸಂಪರ್ಕ ಕಲ್ಪಿಸುವ ರಸ್ತೆಯು ಹಲವಾರು ವರ್ಷಗಳಿಂದ ಹದಗೆಟ್ಟಿ ಸಾರ್ವಜನಿಕರು ಓಡಾಡಲು ತೊಂದರೆ ಆಗುತ್ತಿದ್ದದನ್ನು ಗಮನಿಸಿ ಈ ಕಾಮಗಾರಿಯನ್ನು ಮಂಡ್ಯ ಶಾಸಕರು ಕೈಗೊಂಡಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು.

ಮಂಡ್ಯ ಶಾಸಕ ರವಿಕುಮಾರ್ ಗಣಿಗ ಮಾತನಾಡಿ, ಶೀಘ್ರದಲ್ಲೇ ರಸ್ತೆ ಕಾಮಗಾರಿ ಪೂರ್ಣ ಗೊಳಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ