Friday, September 20, 2024

ಪ್ರಾಯೋಗಿಕ ಆವೃತ್ತಿ

ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ : ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಹೆಲಿಪ್ಯಾಡ್‍ಗೆ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಗಾರ್ಲೆಂಡ್ ಮಾಡಿ ಸ್ವಾಗತ ಕೋರಿದರು. ಈ ವೇಳೆ ಬಿಜೆಪಿ ಮುಖಂಡರ ಜೊತೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಸಹ ಮೋದಿ ಅವರಿಗೆ ಸ್ವಾಗತ ಕೋರಿದ್ದಾರೆ.

“>

ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್‌ ಠಾಣೆಯ ರೌಡಿಪಟ್ಟಿಯಲ್ಲಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಹೆಸರಿದೆ ಎಂದು ಪೊಲೀಸರು ತಿಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಫೈಟರ್ ರವಿ ಪರಸ್ಪರರು ಕೈಜೋಡಿಸಿ ನಮಸ್ಕಾರ ಮಾಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ನೋಡಿದ ಎಂಥವರಿಗೂ ಇದು ಪ್ರಧಾನಿ ಹುದ್ದೆಯ ಘನತೆ ಕುಗ್ಗಿಸುವ ದೃಶ್ಯ ಎನ್ನುವುದು ಮನವರಿಕೆಯಾಗುತ್ತದೆ.

ಇದೀಗ ಕಾಂಗ್ರೆಸ್, ಫೈಟರ್ ರವಿ ವಿಚಾರ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಮೋದಿ ಅವರು ಮಂಡ್ಯಕ್ಕೆ ಬಂದಾಗ ಫೈಟರ್ ರವಿ ಹಾಗೂ ಮೋದಿ ಪರಸ್ಪರ ಕೈಜೋಡಿಸಿ ನಮಸ್ಕರಿಸುವ ಫೋಟೋ ಹಂಚಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಾಗ್ದಾಳಿ ನಡೆಸಿದೆ.

ಭಾನುವಾರ ದಶಪಥ ಉದ್ಘಾಟನೆಗೆ ಪಿಇಎಸ್‌ ಕಾಲೇಜು ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ವೇಳೆ ಮಲ್ಲಿಕಾರ್ಜುನ (ಫೈಟರ್ ರವಿ) ಕೂಡ ಇದ್ದರು. ಪ್ರಧಾನಿ ಮೋದಿ ಹಾಗೂ ಫೈಟರ್ ರವಿ ಪರಸ್ಪರ ನಮಸ್ಕಾರ ಮಾಡಿದರು. ಮಲ್ಲಿಕಾರ್ಜುನ ಮೇಲೆ ರೌಡಿಶೀಟರ್ ಆರೋಪ ಇದೆ ಎಂದು ಬಿಂಬಿತವಾಗಿರುವ ಹಿನ್ನೆಲೆಯಲ್ಲಿ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

“>

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ”ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ..  ಇಲ್ಲ. ಫೈಟರ್ ರವಿ ಎಂಬ ರೌಡಿಶೀಟರ್ ಎದುರು ಕೈಮುಗಿದು ನಿಂತ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು” ಎಂದು ಟ್ವಿಟ್ ಮಾಡಿದೆ.

ಈ ಹಿಂದೆ ಕಾಂಗ್ರೆಸ್, ”ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ? ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿತ್ತು.

”ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು. ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ! ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!