Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಕೊನೆಭಾಗದ ನಾಲೆಗಳ ಅಭಿವೃದ್ಧಿಗೆ 5 ಕೋಟಿ ರೂ. ವೆಚ್ಚ- ಶಾಸಕ ರವಿಕುಮಾರ್

ಮಂಡ್ಯ ತಾಲೂಕಿನ ಮಲ್ಲಯ್ಯನ ದೊಡ್ಡಿ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ 5 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುವ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, 50 ವರ್ಷಗಳ ವರೆಗೂ ಬಳಸಬಹುದಾದ ರೈತರ ಜಮೀನುಗಳಿಗೆ ಸರಾಗವಾಗಿ ನೀರು ಹರಿಯಲು ಬೆಳೆ ಬೆಳೆಯುವ ಅನುಕೂಲಕ್ಕಾಗಿ ಕಾಂಗ್ರೆಸ್ ರಾಜ್ಯ ಸರ್ಕಾರ 5 ಕೋಟಿ ವೆಚ್ಚದಲ್ಲಿ ನಾಲೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.

ವಿಶ್ವೇಶ್ವರಯ್ಯ ಶಾಖಾ ನಾಲೆಯಡಿ ಮಲ್ಲಯ್ಯನ ದೊಡ್ಡಿ,ಹಳೇಬೂದನೂರು, ಬ.ಗೌಡಗೆರೆ, ಕನ್ನಲಿ ಗ್ರಾಮಗಳಿಗೆ ಹೋಗುವ ಸಹನಾಲೆ ಮತ್ತು ವಿತರಣಾಲಯ ಅಭಿವೃದ್ಧಿ ಕಾಮಗಾರಿ ಆರಂಭಗೊಳ್ಳಲಿದೆ ಕೊನೆ ಭಾಗದ ರೈತರ ಜಮೀನುಗಳಿಗೆ ಯಾವುದೇ ಅಡೆತಡೆ ಇಲ್ಲದೆ ಕೇವಲ 24 ಗಂಟೆಗಳಲ್ಲಿ ಜಮೀನುಗಳಿಗೆ ನೀರು ಹರಿಯಲಿದೆ ಎಂದು ತಿಳಿಸಿದರು.

ರೈತರ ಜಮೀನುಗಳಿಗೆ ನಾಳೆಗಳಲ್ಲಿ ನೀರು ಐದು ದಿನ ಆದರೂ ಬಾರದ ಹಿನ್ನೆಲೆಯಲ್ಲಿ ಸರ ವೇಗದಲ್ಲಿ ನೀರು ಹರಿಯುವಂತೆ ವ್ಯವಸ್ಥೆ ಮಾಡಲಾಗಿದೆ ಕೊನೆ ಭಾಗದ ರೈತರಿಗೆ 24 ಗಂಟೆಗಳಲ್ಲಿ ನೀರು ಜಮೀನುಗಳಿಗೆ ಸೇರುವಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಮಲ್ಲಯ್ಯನ ದೊಡ್ಡಿ ಗ್ರಾಮದಲ್ಲಿರುವ 2 ಕಿಲೋಮೀಟರ್ ರಸ್ತೆ ಅಭಿವೃದ್ಧಿಗೆ 2.50 ಕೋಟಿ ರೂಗಳನ್ನು ಹಾಕಿದ್ದೇವೆ ಟೆಂಡರ್ ಮುಗಿದ ತಕ್ಷಣವೇ ರಸ್ತೆ ಅಭಿವೃದ್ಧಿ ಕಾಮಗಾರಿ ಆಗಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕರಿಗೆ ಸ್ಥಳೀಯ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್ ಚಿದಂಬರ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ತ್ಯಾಗರಾಜು, ಸ್ಥಳೀಯ ಮುಖಂಡ ಸಿದ್ದೇಗೌಡ ಹಾಗೂ ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ