Thursday, September 19, 2024

ಪ್ರಾಯೋಗಿಕ ಆವೃತ್ತಿ

ನಿಯಮ ಉಲ್ಲಂಘಿಸಿ ತಂಬಾಕು ಮಾರಾಟ : ಪ್ರಕರಣ ದಾಖಲು

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಿವಿಧೆಡೆ ನಿಯಮ ಉಲ್ಲಂಘಿಸಿ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿ, ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಯಿತು.

ಈ ಕಾರ್ಯಾಚರಣೆಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ 13 ಪ್ರಕರಣ ದಾಖಲಿಸಿ, ರೂ.2000 ದಂಡ ಮತ್ತು ಸೆಕ್ಷನ್ 6ಬಿ ಅಡಿಯಲ್ಲಿ 4 ಪ್ರಕರಣ ದಾಖಲಿಸಿ, ರೂ. 700 ದಂಡ ವಿಧಿಸಲಾಯಿತು. ಒಟ್ಟಾರೆಯಾಗಿ 17 ಪ್ರಕರಣಗಳನ್ನು ದಾಖಲಿಸಿ ಒಟ್ಟು ರೂ.2700 ದಂಡ ವಿಧಿಸಲಾಯಿತು.

ಎಲ್ಲಾ ವಿದ್ಯಾಸಂಸ್ಥೆಗಳನ್ನು ಶೇ.100ರಷ್ಟು ತಂಬಾಕು ಮುಕ್ತಗೊಳಿಸುವ ಉದ್ದೇಶದಿಂದ ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಸಂಜಯ್ ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ನಿರಂಜನ್ ಅವರ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ಕೋಟ್ಪಾ ಕಾರ್ಯಾಚರಣೆ ಇಂದು ಕೆ.ಆರ್.ಪೇಟೆ ತಾಲ್ಲೂಕಿನ ತೆಂಡೇಕೆರೆ ವ್ಯಾಪ್ತಿಯಲ್ಲಿ ನಡೆಯಿತು.

ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ವಿದ್ಯಾಸಂಸ್ಥೆಗಳ 100 ಗಜ ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಧುಸೂದನ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಹಾಗೆಯೇ ಇನ್ನು ಮುಂದೆ ನಿಯಮ ಉಲ್ಲಂಘನೆ ಮಾಡದಂತೆ ಹಾಗೂ ಅಗತ್ಯವಿರುವವರು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯ ತಂಬಾಕು ವ್ಯಸನಮುಕ್ತ ಕೇಂದ್ರದಲ್ಲಿ ಉಚಿತ ಸೇವಾ ಸೌಲಭ್ಯಗಳನ್ನು ಬಳಸಿಕೊಳ್ಳಲು ಕರಪತ್ರಗಳನ್ನು ವಿತರಿಸಿ ಅರಿವು ಮೂಡಿಸಲಾಯಿತು.

ಕಾರ್ಯಾಚರಣೆಯಲ್ಲಿ ಜಿಲ್ಲಾ ಸಲಹೆಗಾರ ತಿಮ್ಮರಾಜು, ಜಿಲ್ಲಾ ಆರೋಗ್ಯ ಮೇಲ್ವೀಚಾರಕರಾದ ವೆಂಕಟೇಶ್, ಪ್ರೊ.ಎಸ್.ಐ.ಸಲ್ಮಾನ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ, ಸಮಾಜ ಕಾರ್ಯಕರ್ತ ಮೋಹನ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಹರಿಕೃಷ್ಣ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!