Thursday, September 19, 2024

ಪ್ರಾಯೋಗಿಕ ಆವೃತ್ತಿ

ಎಸ್.ಸಿ.ಪಿ, ಟಿ.ಎಸ್.ಪಿ ಅನುದಾನ ಶೇ.100 ಸದ್ಭಳಕೆ ಮಾಡಿ : ಜಿಲ್ಲಾಧಿಕಾರಿ

ಸರ್ಕಾರದ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಎಸ್.ಸಿ.ಪಿ, ಟಿ.ಎಸ್.ಪಿ (ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ) ಅನುದಾನವನ್ನು ಶೇ100ರಷ್ಟು ಸದ್ಭಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ  ಜನವರಿ-2023 ರ ಮಾಹೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಎಸ್.ಸಿ.ಪಿ, ಟಿ.ಎಸ್.ಪಿ ಅನುದಾನವನ್ನು ಆಯಾ ಆರ್ಥಿಕ ವರ್ಷದಲ್ಲೇ ಬಳಕೆ ಮಾಡಬೇಕು. ಅನುದಾನ ಬಳಕೆ ಮಾಡದೇ ವ್ಯರ್ಥವಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆ ಕಡಿಮೆ ಪ್ರಮಾಣದಲ್ಲಿ ಇದ್ದಾರೆ, ಅವರನ್ನು ಗುರುತಿಸಿ ಅರ್ಹರಿಗೆಲ್ಲಾ ಸೌಲಭ್ಯಗಳನ್ನು ತಲುಪಿಸಿ. ವಿವಿಧ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ಸಿಗುವ ಸೌಲಭ್ಯಗಳನ್ನು ಜನಪ್ರತಿನಿಧಿಗಳ ಸಮ್ಮುಖದಲ್ಲಿ ಫಲಾನುಭವಿಗಳನ್ನು ಗುರುತಿಸಿ ಅರ್ಹರಿಗೆ ತಲುಪಿಸಿ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕ ರಂಗೇಗೌಡ, ತೋಟಗಾರಿಕೆ ಇಲಾಖೆಯ ಉಪ ನಿರ್ದೆಶಕ ಮಂಜುನಾಥ್, ಕಾರ್ಮಿಕ ಇಲಾಖೆ ಅಧಿಕಾರಿ ಮಂಜುಳದೇವಿ, ಲೀಡ್ ಬ್ಯಾಂಕ್ ನ ದೀಪಕ್, ಡಿಡಿಪಿಯು ಉಮೇಶ್, ಅಂಗವಿಕಲ ಹಾಗೂ ಹಿರಿಯ ನಾಗರೀಕ ಕಲ್ಯಾಣಾಧಿಕಾರಿ ರೋಹಿತ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ ಸೇರಿದಂತೆ ಇನ್ನಿತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!