Thursday, September 19, 2024

ಪ್ರಾಯೋಗಿಕ ಆವೃತ್ತಿ

ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಚೇತರಿಕೆ

ಕಳೆದ ಮೂರು ದಿನಗಳ‌ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ
ಎಸ್. ಎಂ. ಕೃಷ್ಣರವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಕೃಷ್ಣರವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಆಗಿದ್ದು, ಸಂಪೂರ್ಣ ಆರೋಗ್ಯವಾಗಿದ್ದಾರೆ. ಇಂದು ಕೃಷ್ಣ ಅವರು ದಿನಪತ್ರಿಕೆಗಳನ್ನು ಓದಿದರು.

ಇನ್ನು ಎರಡು ಅಥವಾ ಮೂರು ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಲಿದ್ದಾರೆ. ವೈದ್ಯರ ಸಲಹೆಯಂತೆ ಸಂಪೂರ್ಣ ವಿಶ್ರಾಂತಿ ಪಡೆಯಲಿದ್ದಾರೆ.  ಮಂಡ್ಯ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಇಂದು ಕೃಷ್ಣ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಕೃಷ್ಣ ಕೃತಜ್ಞತೆ

ಕಳೆದ ಮೂರು ದಿನಗಳಿಂದ‌ ತಮ್ಮ ಆರೋಗ್ಯದ ಬಗ್ಗೆ ಆತಂಕಗೊಂಡು ನನ್ನ ಆರೋಗ್ಯದ ಚೇತರಿಕೆಗೆ ಹಾರೈಸಿದ ಹಿತೈಷಿಗಳು, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಎಸ್.ಎಂ ಕೃಷ್ಣ ಕೃತಜ್ಞತೆ ಸಲ್ಲಿಸಿದ್ದಾರೆ. ಯಾರು ತಮ್ಮ ಆರೋಗ್ಯದ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ತಿಳಿಸಿದ್ದು, ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!