Saturday, May 18, 2024

ಪ್ರಾಯೋಗಿಕ ಆವೃತ್ತಿ

ಎಸ್.ಎಂ.ಕೃಷ್ಣ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ಶ್ಲಾಘನೀಯ: ಸಿ.ಪಿ.ಉಮೇಶ್

ದೇಶ ಕಂಡ ಸಂಭಾವಿತ ರಾಜಕಾರಣದ ಹೆಗ್ಗುರಾತಾಗಿರುವ ಹಾಗೂ ಹಲವು ಜನಪರ ಯೋಜನೆಯನ್ನು ಜಾರಿಗೊಳಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ನೀಡುತ್ತಿರುವುದು ಶ್ಲಾಘನೀಯ ಎಂದು ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ, ಮಂಡ್ಯ ಲೋಕಸಭಾ ಕ್ಷೇತ್ರದ ಸಂಚಾಲಕ ಸಿ.ಪಿ.ಉಮೇಶ್ ಹೇಳಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದಲ್ಲಿ ಹಲವು ಹುದ್ದೆಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಕೃಷ್ಣ ಅವರು ಸುಮಾರು ವರ್ಷ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ಪ್ರತಿ ಹುದ್ದೆಯಲ್ಲೂ ತಮ್ಮ ಹೆಜ್ಜೆ ಗುರುತು ಮೂಡಿಸಿದ್ದರ ಫಲವಾಗಿ ಎಸ್‌ಎಂಕೆ ಅವರಿಗೆ ಭಾರತ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮವಿಭೂಷಣವನ್ನು ನೀಡಿ ಗೌರವಿಸಿದೆ.

ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದ ಬಿಸಿಯೂಟ ಯೋಜನೆ ಮತ್ತು ಮಾಹಿತಿ ಸಿಂಧು ಯೋಜನೆ, ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಂತಹ ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ರೈತ ಕುಟುಂಬಗಳ ಆರೋಗ್ಯದ ರಕ್ಷಣೆಗಾಗಿ ಯಶಸ್ವಿನಿ ಯೋಜನೆ ಅವರ ಸಾಮಾಜಿಕ ಕಳಕಳಿಗೆ ಹಿಡಿದ ಕನ್ನಡಿಯಾಗಿತ್ತು ಎಂದು ಶ್ಲಾಘಿಸಿದ್ದಾರೆ.

ಬೆಂಗಳೂರನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಐಟಿ, ಬಿಟಿ ಕೈಗಾರಿಕೆಗಳನ್ನು ಪ್ರಾರಂಭಿಸಿ ಹೈಟೆಕ್ ರಾಜಧಾನಿಯನ್ನಾಗಿ ಹಾಗೂ ಭಾರತದ ಐಟಿ ಹಬ್ ಮಾಡುವಲ್ಲಿ ಎಸ್‌ಎಂಕೆ ಕೊಡುಗೆ ಎಂದೆಂದಿಗೂ ಸ್ಮರಣೀಯ. ಹೀಗೆ ಜಿಲ್ಲೆಯ ಕೀರ್ತಿಯನ್ನು ಇಡೀ ವಿಶ್ವಕ್ಕೆ ಪಸರಿಸಿದಂತಹ ಎಸ್.ಎಂ.ಕೃಷ್ಣ ಅವರ ಗರಡಿಯಲ್ಲಿ ಪಳಗಿದ ಅದೆಷ್ಟೋ ಜನರು ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಸ್ಥಾನಮಾನಗಳನ್ನು ಪಡೆದಿದ್ದಾರೆ. ಇಂತಹ ಅರ್ಹ ವ್ಯಕ್ತಿ ಡಾಕ್ಟರೇಟ್ ಪದವಿ ನೀಡುತ್ತಿರುವುದು ಮೆಚ್ಚುಗೆ ವಿಷಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!