ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಮೂವರು ಟಾಪರ್ ಆಗಿ ಹೊರಹೊಮ್ಮಿದ್ದು, ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಮೂವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಮಳವಳ್ಳಿ ಪಟ್ಟಣದ ಅನಿತಾ ಕಾನ್ವೆಂಟ್ ವಿದ್ಯಾರ್ಥಿ ಗಗನ್ ಕೆ.ಎಂ, ಮಳವಳ್ಳಿಯ ರೋಟರಿ ಸ್ಕೂಲ್ ವಿದ್ಯಾರ್ಥಿ ಸೂರಜ್ ಗೌಡ ಎಂ.ಎನ್.ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಮೊಗರಹಳ್ಳಿಯ ಶ್ರೀ ಮಹಾಲಕ್ಷ್ಮಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅಪೂರ್ವ ಎಚ್.ಎಸ್. 625 ಅಂಕ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು.