Thursday, October 10, 2024

ಪ್ರಾಯೋಗಿಕ ಆವೃತ್ತಿ

ಎಸ್ ಎಸ್ ಎಲ್ ಸಿ ಫಲಿತಾಂಶ ನಾಳೆ ಪ್ರಕಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ #ಫಲಿತಾಂಶವನ್ನು (SSLC Result 2022) ನಾಳೆ ಮಧ್ಯಾಹ್ನ (ಮೇ 19 ರಂದು) 12.30ಕ್ಕೆ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ಟ್ವೀಟ್ ಮಾಡಿ ಮಾಹಿತಿ‌ ಹಂಚಿಕೊಂಡಿದ್ದಾರೆ.

ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ ಎಂ ಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಸಚಿವರು ಶುಭ ಹಾರೈಸಿದ್ದಾರೆ.

2022 ನೇ ಸಾಲಿನ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್‌ 28 ರಿಂದ ಏಪ್ರಿಲ್‌ 11 ರವರಗೆ ನಡೆಸಲಾಗಿತ್ತು. ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಣಿ ಮಾಡಿಕೊಂಡಿದ್ದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು.

ಈ ಹಿಂದೆ ಮೇ 15 ರಂದು ಫಲಿತಾಂಶವನ್ನು ಪ್ರಕಟಿಸಲಾಗುವುದೆಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹತಿ ನೀಡಿತ್ತು. ಆದರೆ ಸಾಲುಸಾಲು ರಜೆಗಳಿರುವ ಕಾರಣ, ಮೌಲ್ಯಮಾಪನ ಮಾಡುವಲ್ಲಿ ಸ್ವಲ್ಪ ವಿಳಂಭವಾಗಿತ್ತು.

ಈಗಾಗಲೇ ಮೌಲ್ಯ ಮಾಪನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಮೌಲ್ಯ ಮಾಪನದಲ್ಲಿನ ಸಣ್ಣಪುಟ್ಟ ದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ. ಮೌಲ್ಯಮಾಪನ ಕೆಲಸ ಮುಕ್ತಾಯವಾದ ಮೇಲೆ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಮೇ 19 ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.

SSLC Result 2022 ಫಲಿತಾಂಶ ಚೆಕ್ ಮಾಡುವುದು ಹೇಗೆ?

Step-1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (kseeb) ವೆಬ್‌ಸೈಟ್‌ karresults.nic.in ಗೆ ಭೇಟಿ ನೀಡಿ.

Step-2: ಪೇಜ್‌ ಓಪನ್‌ ಆದ ಮೇಲೆ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕವನ್ನು Enter ಮಾಡಿಬೇಕು.

Step-3: ನಂತರ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.

Step-4: ಆಗ ನಿಮ್ಮ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2022) ಕಾಣುತ್ತದೆ.

Step-5: ನಿಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಂಡು ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಬಹುದು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!