Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೇಂದ್ರ ಬಜೆಟ್‌ | ಎರಡೇ ರಾಜ್ಯಗಳಿಗೆ ಆದ್ಯತೆ; ವಿಪಕ್ಷಗಳಿಂದ ಸಭಾತ್ಯಾಗ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕೇವಲ ಎರಡೇ ರಾಜ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಉಳಿದ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳ ನಾಯಕರು ಸಭಾತ್ಯಾಗ ಮಾಡಿದ್ದಾರೆ. ಕೇವಲ ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಮಾತ್ರವೇ ಹೆಚ್ಚು ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಬಜೆಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೇಂದ್ರ ಸರ್ಕಾರದ ಬಜೆಟ್‌ ‘ಕುರ್ಚಿ ಬಚಾವೊ’ ಡಾಕ್ಯುಮೆಂಟ್ ಆಗಿದೆ. ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ. ಸದನದಲ್ಲಿ ನಿಗದಿಯಾಗಿದ್ದ ಎಲ್ಲ ಚರ್ಚೆಗಳನ್ನು ರದ್ದುಗೊಳಿಸಿ ನಿಯಮ 267ರ ಅಡಿಯಲ್ಲಿ ಬಜೆಟ್‌ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು” ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಭಾಧ್ಯಕ್ಷ ಜಗದೀಪ್ ಧನಕರ್ ಅವರಿಗೆ ಮನವಿ ಮಾಡಿದರು.

ಆದರೆ, ಅವರ ಮನವಿಯನ್ನು ಧನಕರ್ ತಿರಸ್ಕರಿಸಿದರು. ಬಳಿಕ, ‘ಇಂಡಿಯಾ’ ಒಕ್ಕೂಟದ ಎಲ್ಲ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.

ಎರಡೇ ರಾಜ್ಯಗಳಿಗೆ ಆದ್ಯತೆ ನೀಡಲಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, “ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗಲೂ ಬಜೆಟ್‌ನಲ್ಲಿ ಎಲ್ಲ ರಾಜ್ಯಗಳನ್ನು ಉಲ್ಲೇಖಿಸಿರಲಿಲ್ಲ” ಎಂದು ಸಮಜಾಯಿಷಿ ನೀಡಿದ್ದಾರೆ.

“ಮಹಾರಾಷ್ಟ್ರ ರಾಜ್ಯವನ್ನು ಎರಡೂ ಬಜೆಟ್‌ಗಳಲ್ಲಿ ಉಲ್ಲೇಖ ಮಾಡಿಲ್ಲ. ಅದಾಗ್ಯೂ, ಮಹಾರಾಷ್ಟ್ರದಲ್ಲಿ ವಾಧವನ್ ಬಂದರು ಕಾಮಗಾರಿಗೆ 76,000 ಕೋಟಿ ರೂ. ಅನುದಾನ ನೀಡಿದೆ. ಆಂಧ್ರ ಪ್ರದೇಶ, ಬಿಹಾರ ರಾಜ್ಯಗಳು ಮಾತ್ರವಲ್ಲದೆ, ಇತರ ರಾಜ್ಯಗಳಿಗೂ ಹಲವು ಯೋಜನೆಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

“>

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!