ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿಆರ್ ಅಂಬೇಡ್ಕರ್ ರವರ 131ನೇ ಜಯಂತಿ ಅಂಗವಾಗಿ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ಮಾಲಾರ್ಪಾಣೆ ಮಾಡಿ ಗೌರವ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು ಅಂಬೇಡ್ಕರ್‌ರವರು ಸಮಾನತೆಗಾಗಿ ಹೋರಾಡಿದ ಮಹಾನ್ ನಾಯಕ. ನಮ್ಮ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಅವರ ಚಿಂತನೆ, ಆದರ್ಶಗಳು ನಮಗೆ ಮಾದರಿಯಾಗಿವೆ.ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸಲು ಸಂಕಲ್ಪ ಮಾಡಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ತಡಗವಾಡಿ ಬಾಪು, ಸೂನಗಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಮಚಂದ್ರು, ಜಿ.ಬಿ. ವೇಣು, ಶ್ರೀಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.