ನಾಗಮಂಗಲ ತಾಲ್ಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಪುತ್ರ ಚಿತ್ರನಟ ಸಚಿನ್ ಗೆಲುವು ಸಾಧಿಸಿದ್ದಾರೆ.
ಸಾಲಗಾರರಲ್ಲದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 418 ಚಲಾವಣೆಯಾದ ಮತಗಳ ಪೈಕಿ, 258 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಅವರ ವಿರುದ್ದ ಸ್ಪರ್ಧೆ ಮಾಡಿದ್ದ ರಾಮು 160 ಮತಗಳನ್ನು ಪಡೆದು ಪರಾಜಿತರಾಗಿದ್ದಾರೆ. ಸಚಿನ್ 98 ಮತಗಳ ಅಂತರದಿಂದ ಜಯಶೀಲರಾಗಿದ್ದಾರೆ.




