Thursday, September 19, 2024

ಪ್ರಾಯೋಗಿಕ ಆವೃತ್ತಿ

ಚುನಾವಣಾ ರಾಜಕೀಯ ನಿವೃತ್ತಿಗೆ ಒತ್ತಡವಿರಲಿಲ್ಲ- ಸದಾನಂದಗೌಡ

ಮೂವತ್ತು ವರ್ಷದಿಂದ ಎಲ್ಲ ಸ್ಥಾನಮಾನ ನೋಡಿದ್ದೇನೆ, ಪಕ್ಷದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಗಿದ್ದೆ, ಕೇಂದ್ರ ಸರ್ಕಾರದಲ್ಲಿ ಏಳು ವರ್ಷ ಸಚಿವನಾಗಿದ್ದೆ, ರಾಜ್ಯದ ಮುಖ್ಯಮಂತ್ರಿಯೂ ಆಗಿದ್ದೆ, ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿರುವ ಹಿಂದೆ ಯಾರ ಒತ್ತಡವು ಇರಲಿಲ್ಲ ಎಂದು ಮಾಜಿ ಸಿಎಂ ಸದಾನಂದಗೌಡ ಸ್ಪಷ್ಟಪಡಿಸಿದರು.

ಮದ್ದೂರು ತಾಲೂಕಿನ ಸಿದ್ದೇಗೌಡನದೊಡ್ಡಿಯಲ್ಲಿ ಬರ ಅಧ್ಯಯನ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನುಷ್ಯನಿಗೆ ಕೆಲವು ಇತಿಮಿತಿ ಇರಬೇಕು. ಪಕ್ಷ ರಾಜ್ಯ ಅಧ್ಯಕ್ಷನಾಗಿ ಪಕ್ಷವನ್ನು ಮುನ್ನಡೆಸಿದ್ದೇನೆ, ರಾಜಕಾರಣಕ್ಕೆ ಪ್ರವೇಶಿಸಿದ 25 ವರ್ಷದ ನಂತರ ಚುನಾವಣಾ ರಾಜಕೀಯದಿಂದ ದೂರ ಆಗಬೇಕು ಎಂದುಕೊಂಡಿದ್ದೆ. ಆದರೆ ಈಗ ನಿವೃತ್ತಿ ಘೋಷಣೆ ಮಾಡಿದ್ದೇನೆ ಎಂದರು.

ಪಕ್ಷ ಎಲ್ಲವೂ ಕೊಟ್ಟಿದೆ, ಪಕ್ಷದ ಒತ್ತಡದ ಹಿನ್ನೆಲೆಯಲ್ಲಿ ಕಳೆದ ಬಾರಿ ಲೋಕಸಭೆ ಚುನಾವಣೆಗೆ ಸ್ವರ್ಧೆ ಮಾಡಿದ್ದೆ, ಆರು ತಿಂಗಳ ಮುನ್ನ ನಿವೃತ್ತಿ ಪ್ರಕಟಿಸಿದರೆ, ಪಕ್ಷಕ್ಕೆ ಹೊಸಬರನ್ನ ಹುಡುಕಲು ಅನುಕೂಲ ಆಗಲಿದೆ. ಹಾಗಾಗಿ ಪಕ್ಷದ ಕೆಲಸ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದೆ ಎಂದರು.

ಸುಮಲತಾ ಅಂಬರೀಶ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿಕೆ ಪ್ರತಿಕ್ರಿಯಿಸಿ, ಕೈಯಲ್ಲಿ ಐದು ಬೆರಳು ಸಮವಾಗಿ ಇರುವುದಿಲ್ಲ,ಅದೇ ರೀತಿ ರಾಜಕೀಯ ಪಕ್ಷದಲ್ಲಿ ಕೆಲವರು ಇರುತ್ತಾರೆ, ಅದರ ಬಗ್ಗೆ ನಾನು ವಾದ ಮಾಡುವುದಿಲ್ಲ. ರಾಜಕೀಯ ಪಕ್ಷದಲ್ಲಿ ‌ಎಲ್ಲರೂ ಒಂದೇ ರೀತಿ ಇರಲ್ಲ, ಬೇರೆ ಮನಸ್ಸು ಇರುತ್ತದೆ ಎಂದು ಉತ್ತರಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!