Thursday, November 19, 2026

ಪ್ರಾಯೋಗಿಕ ಆವೃತ್ತಿ

ವೇತನ ಪರಿಷ್ಕರಣೆಗೆ ಆಗ್ರಹಿಸಿ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ವೇತನ ಭತ್ಯೆ ಹೆಚ್ಚಳ ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ವಿವಿಧ ಭೇಡಿಕೆಗಳಿಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಹೆಚ್.ಎನ್‌. ಗೋಪಾಲಕೃಷ್ಣ ಹಾಗೂ ಜಿ.ಪಂ. ಸಿಇಓ ಶಾಂತ ಎಲ್. ಹುಲ್ಮನಿ ಅವರಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಂಭುಗೌಡ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ದಿನಾಂಕ:21-02-2023ರಂದು ನಡೆದ ರಾಜ್ಯ ಕಾರ್ಯಕಾರಿಣಿ ಮತ್ತು ವೃಂದ ಸಂಘಗಳ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ತೀರ್ಮಾನದಂತೆ, ರಾಜ್ಯದ ಸಮಸ್ತ ಸರ್ಕಾರಿ ಅಧಿಕಾರಿ ನೌಕರರು ದಿನಾಂಕ:01-03-2023ರ ಬುಧವಾರದಿಂದ ಕರ್ತವ್ಯಕ್ಕೆ ಗೈರುಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದೇವೆ ಎಂದು ಜಿಲ್ಲಾಡಳಿತಕ್ಕೆ ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ನ್ಯಾಯಯುತವಾದ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು, ದಿನಾಂಕ: 01-07-2022ರಿಂದ ಜಾರಿಗೆ ಬರುವಂತೆ ಶೇ.40% ರಷ್ಟು ವೇತನ ಹೆಚ್ಚಳ ಸೌಲಭ್ಯವನ್ನು ಸರ್ಕಾರಿ ಆದೇಶ ಹೊರಡಿಸುವ ಮೂಲಕ ಅನುಷ್ಠಾನಗೊಳಿಸುವುದು.

ಪಂಜಾಬ್, ರಾಜಸ್ಥಾನ, ಛತ್ತಿಸ್‌ ಘಡ, ಜಾರ್ಖಂಡ್, ಹಿಮಾಚಲಪ್ರದೇಶ ರಾಜ್ಯಗಳ ಮಾದರಿಯಲ್ಲಿ NPS ರದ್ದುಪಡಿಸಿ, OPSಯೋಜನೆಯನ್ನು ಜಾರಿಗೊಳಿಸುವುದು ಮೊದಲಾದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದರು.

ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ತಮ್ಮಣ್ಣೇಗೌಡ, ಗೋಪಾಲ ಸೇರಿದಂತೆ ಮತ್ತಿತರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ