Friday, November 20, 2026

ಪ್ರಾಯೋಗಿಕ ಆವೃತ್ತಿ

ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ; ಸಿಎಂ ಸಿದ್ದರಾಮಯ್ಯ

ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ.

ಜನವರಿ ತಿಂಗಳಲ್ಲಿ ಕಲಬುರ್ಗಿಯ ಸೇಡಂನಲ್ಲಿ ಭಾರತ ವಿಕಾಸ ಸಂಗಮ ಎಂಬ ಸಂಸ್ಥೆಯು ‘ಭಾರತೀಯ ಸಂಸ್ಕೃತಿ ಉತ್ಸವ-7’ ಎಂಬ ಕಾರ್ಯಕ್ರಮ ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಂಘಪರಿವಾರವನ್ನು ಸೈದ್ಧಾಂತಿಕವಾಗಿ ವಿರೋಧಿಸುವ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗಿಯಾತ್ತಿದ್ದಾರೆ ಎಂಬದು ಸಾಕಷ್ಟು ವಿರೋಧ, ಆಕ್ಷೇಪ, ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.

“>

 

ಈ ಬೆನ್ನಲ್ಲೇ, ಊಹಾಪೋಹಗಳು, ಚರ್ಚೆಗಳಿಗೆ ತೆರೆ ಎಳೆದಿರುವ ಸಿದ್ದರಾಮಯ್ಯ ಅವರು ಸಂಘಪರಿವಾರದ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಅವರು ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದು, “ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ‘ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ