Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಂಗೊಳ್ಳಿ ರಾಯಣ್ಣ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ : ಭೈರತಿ ಬಸವರಾಜು

ಸಂಗೊಳ್ಳಿ ರಾಯಣ್ಣ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಇವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ರಾಯಣ್ಣನಲ್ಲಿದ್ದ ದೇಶಭಕ್ತಿ, ತ್ಯಾಗ, ಬಲಿದಾನದ ಗುಣಗಳು ದೇಶಕ್ಕೆ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಲು ಪ್ರೇರಕ ಶಕ್ತಿಯಾಗಿತ್ತು. ಸ್ವಾತಂತ್ರ್ಯ ಹೋರಾಟಗಾರರ ನಿಸ್ವಾರ್ಥ ಹೋರಾಟವು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿತ್ತು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಸ್ಮರಿಸಿದರು.

ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕರ ಬಳಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮಾಡಿದ ಅವರು ಮಾತನಾಡಿದರು.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪೋಟೋ ಇಟ್ಟು ಗೌರವ ಸಲ್ಲಿಸುವ ಜೊತೆಗೆ ಸಂಗೊಳ್ಳಿ ರಾಯಣ್ಣನ ಪೋಟೋ ಕೂಡ ಇಟ್ಟು ಗೌರವ ಸಲ್ಲಿಸಲು ಸರ್ಕಾರವು ಆದೇಶ ಹೊರಡಿಸಲು ಸಚಿವ ಸಂಪುಟದಲ್ಲಿ ತಿರ್ಮಾನ ಕೈಗೊಂಡು ಶಾಲಾ ಕಾಲೇಜು, ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮಾಡುವ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಸಂಗೊಳ್ಳಿ ರಾಯಣ್ಣ ಪೋಟೋ ಇಟ್ಟು ಗೌರವ ಸಲ್ಲಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾತನಾಡಿದ ಸಚಿವ ಕೆ.ಸಿ.ನಾರಾಯಣಗೌಡ, ಗ್ರಾಮೀಣ ಭಾಗದ ಜನತೆ ಚುನಾವಣೆ ಸಮಯದಲ್ಲಿ 15 ದಿನ‌ಮಾತ್ರ ರಾಜಕೀಯದಲ್ಲಿ ತೊಡಗಿಸಿಕೊಳ್ಳಬೇಕು. ಉಳಿದ ದಿನಗಳಲ್ಲಿ ಯಾರು ಗೆಲ್ಲುತ್ತಾರೋ ಅವರಿಂದ ಗ್ರಾಮದ ಅಭಿವೃದ್ದಿಗೆ ಕೆಲಸ ಮಾಡಿಸಿಕೊಳ್ಳಬೇಕು. ಹಾಲು‌ಮತ ಸಮಾಜದ ಅಭಿವೃದ್ದಿಗೆ ತಾಲ್ಲೂಕಿನಲ್ಲಿ ಸಾಕಷ್ಟು ಕೆಲಸ ಮಾಡಿದ ತೃಪ್ತಿ ನನಗಿದೆ ಎಂದರು.

ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಸಮಾಜ ಸೇವಕ ಮಲ್ಲಿಕಾರ್ಜುನ್, ಮಿತ್ರ ಫೌಂಡೇಶನ್ ಅಧ್ಯಕ್ಷ ವಿಜಯ್ ರಾಮೇಗೌಡ, ಪುತ್ಥಳಿ ದಾನಿ ಕೆ.ಚನ್ನಸಂದ್ರ ಹರೀಶ್, ಚನ್ನರಾಯಪಟ್ಟಣ ಚಂದ್ರೆಗೌಡ, ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಕಿಕ್ಕೇರಿ ಸುರೇಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಡಾ.ರಾಮಕೃಷ್ಣೇಗೌಡ, ಜಿ.ಪಂ. ಮಾಜಿ ಸದಸ್ಯ ಕೋಡಿಮಾರನಹಳ್ಳಿ ದೇವರಾಜು, ಪುರಸಭಾ ಸದಸ್ಯರಾದ ಬಸ್ ಸಂತೋಷ್ ಕುಮಾರ್, ಕೆ.ಆರ್.ರವೀಂದ್ರಬಾಬು, ತಾ.ಪಂ.ಮಾಜಿ ಸದಸ್ಯ ಮಾಧವಪ್ರಸಾದ್, ಎ.ಬಿ.ಕುಮಾರ್, ಕಾಳಿದಾಸ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಮೂಡನಹಳ್ಳಿ ರಂಗಸ್ವಾಮಿ, ಜಿಲ್ಲಾ ಕುರುಬರ ಸಂಘದ ನಿರ್ದೇಶಕ ಪ್ರಸನ್ನಕುಮಾರ್ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!