Monday, May 20, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕೆ ಆರ್ ಪೇಟೆ ತಾಲೂಕಿನ ಬಿಕನಹಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪ ಗೊಳಿಸಿ ಅವಮಾನಿಸಿರುವ ಘಟನೆ ನಡೆದಿದೆ.

ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಕೈನಲ್ಲಿದ್ದ ಕತ್ತಿ ಮುರಿದು ಹಾಕಿದ್ದು, ಕೈ ಮತ್ತು ಕಾಲಿನ ಭಾಗದಲ್ಲಿ ವಿರೂಪ ಮಾಡಿದ್ದಾರೆ, ಮಂಗಳವಾರ ತಡ ರಾತ್ರಿ ವೇಳೆ ದುಷ್ಕರ್ಮಿಗಳು ದುಷ್ಕೃತ್ಯ ಎಸಗಿದ್ದು, ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್ ಯುವಕರು ಮತ್ತು ಗ್ರಾಮಸ್ಥರು ಒಗ್ಗೂಡಿ 2023 ಜೂನ್ 18 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು, ಪ್ರತಿಮೆಗೆ ವಿರೂಪಗೊಳಿಸಿ ಅವಮಾನ ಮಾಡಿರುವ ಸುದ್ದಿ ತಿಳಿದ ಗ್ರಾಮಸ್ಥರು ಹಾಗೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸದಸ್ಯರು ಸಂಗೊಳ್ಳಿ ರಾಯಣ್ಣ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಬಿಕನಹಳ್ಳಿ ಗ್ರಾಮದ ಈರೇಗೌಡ ಮಾತನಾಡಿ ದೇಶಕ್ಕಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣ ಮಹಾನ್ ದೇಶಭಕ್ತ ದೇಶಭಕ್ತ, ಅವರ ಆದರ್ಶಗಳನ್ನು ಯುವ ಜನತೆ ಮೈಗೂಡಿಸಿ ಸಹಕಾರಿಯಾಗುವಂತೆ ದೂರ ದೃಷ್ಟಿ ಹಿನ್ನೆಲೆಯಲ್ಲಿ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು,ಆದರೆ ಕಿಡಿಗೇಡಿಗಳು ಪ್ರತಿಮೆ ವಿರೂಪಗೊಳಿಸಿ ಅವಮಾನ ಮಾಡಿದ್ದಾರೆ, ಪ್ರತಿಮೆಯ ಕತ್ತಿ ಕೈ ಕಾಲಿನ ಭಾಗಕ್ಕೆ ಹಾನಿ ಮಾಡಿ ವಿಕೃತಿ ಮೆರೆದಿದ್ದಾರೆ.

ದೇಶಕ್ಕಾಗಿ ಬಲಿದಾನವಾದ ಮಹನೀಯರ ಮೇಲೆ ವಿಕೃತಿ ಮೆರೆದಿರುವ ದುಷ್ಕರ್ಮಿಗಳನ್ನ ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!