Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ರಾಜ್ಯಮಟ್ಟದ ಸಂಸ್ಕೃತ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ

ನಾಗಮಂಗಲ ತಾಲ್ಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಆವರಣದ ಶ್ರೀ ಆದಿಶಕ್ತಿ ಭವನದಲ್ಲಿ ಕರ್ನಾಟಕ ರಾಜ್ಯ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯಮಟ್ಟದ ಸಂಸ್ಕೃತ ಪಾಠಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹಾ ಅಧಿವೇಶನ ಕಾರ್ಯಕ್ರಮ ನಡೆಯಿತು.

ಆದಿಚುಂಚನಗಿರಿ ಮಠಾಧೀಶರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತ ನಾಗರೀಕತೆಯ ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ ಭಾಷೆ ಎಂದರೆ ತಪ್ಪಾಗಲಾರದು, ಸಂಸ್ಕೃತಕ್ಕೆ ಹಿಂದಿನಿಂದಲೂ ಭದ್ರಬುನಾದಿ ಹಾಕಿಕೊಂಡು ಬಂದಿದ್ದರೆ ಪ್ರಸ್ತುತದಲ್ಲಿ ಹಿಂದಿ ಭಾಷೆಯ ಬದಲು ಸಂಸ್ಕೃತವೇ ನಮ್ಮ ರಾಷ್ಟ್ರಭಾಷೆಯಾಗಿ ಉಳಿದಿರುತ್ತಿತ್ತು ಎಂದರು.

ಕರ್ನಾಟಕ ಸಂಸ್ಕೃತಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಸ್.ಅಹಲ್ಯಾ ಮಾತನಾಡಿ, ಸಂಸ್ಕೃತ ವಿಶ್ವವಿದ್ಯಾಲಯದ ದೊಡ್ಡ ಶಕ್ತಿ ಸಂಸ್ಕೃತ ಪಾಠಶಾಲೆಯ ಶಿಕ್ಷಕರಾದ ನೀವುಗಳು ಹಾಗೂ ಮಠಮಾನ್ಯಗಳು ಸಂಸ್ಕೃತವನ್ನು ಜೀವಂತವಾಗಿ ಇಡದಿದ್ದರೆ ಕಷ್ಟಕರವಾಗುತ್ತಿತ್ತು. ಸಂಸ್ಕೃತ ಭಾಷೆ ಮತ್ತು ಉತ್ತಮ ಪರಿಸರ ನಿರ್ಮಾಣ ಮಾಡಲು ಮಠಮಾನ್ಯ ಕೊಡುಗೆ ಅಪಾರವಾದದ್ದು ಸಂಸ್ಕೃತ ಭಾಷೆಗೆ ಬೆನ್ನೆಲುಬಾಗಿ ನಿಮ್ಮೆಲ್ಲರ ಸಹಕಾರದಿಂದ ಸಂಸ್ಕೃತ ವಿಶ್ವವಿದ್ಯಾಲಯ ಒಳ್ಳೆಯ ರೀತಿ ನಡೆದುಕೊಂಡು ಹೋಗುತ್ತಿದೆ ಎಂದರು

ವೇದಿಕೆಯಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೋ. ಮಲ್ಲೆಪುರ ಜಿ ವೆಂಕಟೇಶ್ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡಿ ಗೌರವಿಸಲಾಯಿತು

ವೇದಿಕೆಯಲ್ಲಿ ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲ ಸಚಿವರಾದ ವಿ ಗಿರೀಶ್ ಚಂದ್ರ, ಕರ್ನಾಟಕ ಸಂಸ್ಕೃತಿ ಶಿಕ್ಷಣ ನಿರ್ದೇಶನಾಲಯದ ಪ್ರೊ ಸಿ ಪಾಲಯ್ಯ, ಖ್ಯಾತ ಅಂಕಣಕಾರದ ಆದರ್ಶ ಗೋಖಲೆ ಹಾಗೂ ಕರ್ನಾಟಕ ರಾಜ್ಯ ಸಂಸ್ಕೃತ ಪಾಠಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಗಂಗಾಧರಯ್ಯ, ಪ್ರಧಾನ ಕಾರ್ಯದರ್ಶಿ ಪರಮಶಿವಯ್ಯ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ