ಕೆ.ಆರ್.ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿ ಏತ ನೀರಾವರಿ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ರೇಷ್ಮೆ ಮತ್ತು ಕ್ರೀಡೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಇಂದು ಆಘಲಯದಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಭೆ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ತರಾಟೆ ತೆಗೆದುಕೊಂಡರು.
ಸಂತೆಬಾಚಹಳ್ಳಿ ಹೋಬಳಿಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ, ಆದರೆ ಗುತ್ತಿಗೆದಾರರು ನಿಧಾನಗತಿಯಲ್ಲಿ ಕಾಮಗಾರಿ ನಡೆಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಚಿವರು, ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಿದರು.
ಕಾವೇರಿ ನಿಗಮದ ಎಂಡಿ ಶಂಕರೇಗೌಡ, ಚೀಫ್ ಎಂಜಿನಿಯರ್ ಮಹೇಶ್ ಸೇರಿದಂತೆ ನಿಗಮದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.