ಕಲಬುರಗಿ: ಸಚಿವರ ಮೇಲೆ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಆತ್ಮಹತ್ಯೆಯನ್ನು ಖಂಡಿಸಿರುವ ಕಲಬುರ್ಗಿಯಲ್ಲಿ ಜಿಲ್ಲಾ ಗುತ್ತಿಗೆದಾರರ ಅಸೋಸಿಯೇಷನ್ ಈ ತಕ್ಷಣ ಸಚಿವ ಈಶ್ವರಪ್ಪನವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂಬಂಧ ಕಲಬುರ್ಗಿಯಲ್ಲಿ ಗುತ್ತಿಗೆದಾರರ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಜಗನ್ನಾಥ ಶೇಗಜಿ ಮಾತನಾಡಿ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ಮಾಡಬೇಕು. ಮತ್ತು ಮೃತ ಸಂತೋಷ್ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.