Friday, September 20, 2024

ಪ್ರಾಯೋಗಿಕ ಆವೃತ್ತಿ

BSY ಮನೆ ಮೇಲೆ ದಾಳಿ ಮಾಡಿದ್ದು ಯಾರ “ಸಂತೋಷ”ದ ಕಾರಣಕ್ಕೆ?

BSY (ಯಡಿಯೂರಪ್ಪ) ಅವರು ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ, ಆದರೂ ಸರ್ಕಾರದ ಅವಾಂತರಕ್ಕೆ BSY ಮನೆ ಮೇಲೆ ದಾಳಿ ಆಗಿದ್ದೇಕೆ? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ. BSY ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ “ಸಂತೋಷ ಕೂಟ”ದ ಕೈವಾಡ ಇರುವುದು ನಿಶ್ಚಿತ ಎಂದು ಕಾಂಗ್ರೆಸ್ ಹೇಳಿದೆ.

“>

ಗೃಹಸಚಿವರ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಮನೆಗೆ ರಕ್ಷಣೆ ಇಲ್ಲವೆಂದರೆ ಏನರ್ಥ. ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು? ಅರಗ ಜ್ಞಾನೇಂದ್ರ ಅವರೇ? ಇದು ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಅಥವಾ ಷಡ್ಯಂತ್ರವೇ? ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ BSYರ ಮನೆ ಮೇಲೆ ದಾಳಿ ಮಾಡಿದ್ದು ಯಾರ “ಸಂತೋಷ”ದ ಕಾರಣಕ್ಕೆ? ಎಂದು ಪ್ರಶ್ನಿಸಿದೆ.

ಬಿಜೆಪಿಯ ನಕಲಿ ಚುನಾವಣಾ ತಂತ್ರಗಳು ತಿರುಗುಬಾಣವಾಗಿ ಬಿಜೆಪಿಯನ್ನೇ ಅಟ್ಟಾಡಿಸುತ್ತಿದೆ! ಬಂಜಾರಾ ಸೇರಿದಂತೆ ಹಲವು ಸಮುದಾಯಗಳು ಸರ್ಕಾರದ ವಿರುದ್ದ ಸಿಡಿದು ನಿಲ್ಲುವ ಮೂಲಕ ಬಿಜೆಪಿಯ ಅವನತಿಗೆ ಮುನ್ನುಡಿ ಬರೆಯುವುದು ನಿಶ್ಚಿತ. ಸಿಎಂ ಬೊಮ್ಮಾಯಿ ಅವರೇ, ಸಾಧನೆ, ಯೋಜನೆ ತೋರಿಸದೆ, ಮೂಗಿಗೆ ತುಪ್ಪ ಸವರುವ ರಾಜಕಾರಣವನ್ನು ಜನತೆ ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಕಾಲೆಳೆದಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!