ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು ಮಂಡ್ಯ ಜಿಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ನವೆಂಬರ್ 11 ರಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಂಡ್ಯ ನಗರದ ಪರಿವೀಕ್ಷಣಾ ಮಂದಿರದಲ್ಲಿ ಚರ್ಚೆ ನಡೆಸಲಿದ್ದಾರೆ.
ಬೆಳಿಗ್ಗೆ 10:15 ಗಂಟೆಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಛೇರಿಗೆ ಬೇಟಿ ನೀಡಲಿದ್ದಾರೆ. ಬೆಳಿಗ್ಗೆ 11:00 ಗಂಟೆಗೆ ಡಾ: ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಡ್ಯ ಜಿಲ್ಲೆಯ ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ “ಸ್ಮಾರ್ಟ್ ಕಾರ್ಡ್” ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.




