Thursday, November 19, 2026

ಪ್ರಾಯೋಗಿಕ ಆವೃತ್ತಿ

ಬಲಗೈ ಸಮುದಾಯಕ್ಕೆ ಬಿಜೆಪಿ ಟಿಕೆಟ್ ನೀಡಲು ಆಗ್ರಹ

ಮಂಡ್ಯ ಜಿಲ್ಲೆಯಲ್ಲಿಯೇ ಎಸ್ಸಿ ಮೀಸಲು ಕ್ಷೇತ್ರವಾದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಎಂ.ಮಹದೇವಪ್ಪ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1952ರಲ್ಲಿ ಮೊದಲ ಚುನಾವಣೆ ನಡೆದಿದ್ದು, ಅಂದಿನಿಂದಲೂ ಮಂಡ್ಯ ಜಿಲ್ಲೆಯ ಮಳವಳ್ಳಿ ಮೀಸಲು ಕ್ಷೇತ್ರಕ್ಕೆ ರಾಷ್ಟ್ರೀಯ ಪಕ್ಷಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಅದರಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಿರುವುದು ಗಮನಾರ್ಹವಾಗಿದೆ. ಈ ಹಿನ್ನೆಲೆಯಲ್ಲಿ ಬರುವ ಚುನಾವಣೆಗೆ ಬಲಗೈ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.

ಕ್ಷೇತ್ರದಲ್ಲಿ ಸುಮಾರು 85 ಸಾವಿರ ಪರಿಶಿಷ್ಟ ಜಾತಿಯ ಮತದಾರರಿದ್ದು, 60 ಸಾವಿರ ಒಕ್ಕಲಿಗ ಮತದಾರರು, 45 ಸಾವಿರ ವೀರಶೈವ-ಲಿಂಗಾಯಿತ ಮತದಾರರು, 35 ಸಾವಿರ ಕುರುಬ ಸಮುದಾಯದ ಮತದಾರರಿದ್ದು, ಒಟ್ಟಾರೆಯಾಗಿ ಮಳವಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಎಡಗೈ ಬಲಗೈ ಸಮುದಾಯದ ಮತದಾರರು ಜಾಸ್ತಿ ಇದ್ದಾರೆ. ಅದರಲ್ಲಿ ಬಲಗೈ ಜನಾಂಗ ಎಲ್ಲಾ ಸಮುದಾಯಗಳಿಗಿಂತಲೂ ಅಧಿಕವಾಗಿದ್ದು ಚುನಾವಣೆಯಲ್ಲಿ ಗೆಲ್ಲುವ ದೃಷ್ಟಿಯಿಂದ ಹಿಂದಿನಿಂದಲೂ ರೂಢಿಗತವಾಗಿ ಬಂದಿರುವಂತೆ ಬಲಗೈ ಸಮುದಾಯಕ್ಕೆ ಬಿಜೆಪಿ ಟಿಕೆಟ್ ನೀಡಬೇಕೆಂದರು.

ಒಂದು ವೇಳೆ ತೀರಾ ಅಲ್ಪಸಂಖ್ಯಾತವಾಗಿರುವ ಬೋವಿ ಸಮುದಾಯದ ಅಭ್ಯರ್ಥಿಗೆ ಟಿಕೆಟ್‌ ನೀಡಿದರೆ ದಲಿತ ಸಮುದಾಯದ ಮತಗಳು ಸಂಪೂರ್ಣವಾಗಿ ಬೇರೆ ಪಕ್ಷಕ್ಕೆ ಹೋಗುವ ಸಾಧ್ಯತೆಯೇ ಹೆಚ್ಚಾಗಿದ್ದೂ ಜಿಲ್ಲೆಯ ಸಾಮಾನ್ಯ ಕ್ಷೇತ್ರಗಳ ಮೇಲೆ ಹಾಗೂ ಅಕ್ಕಪಕ್ಕದ ಮೀಸಲು ಕ್ಷೇತ್ರಗಳಾದ ಕೊಳ್ಳೇಗಾಲ, ಟಿ.ನರಸೀಪುರ, ನಂಜನಗೂಡು ಹಾಗು 2024ರಲ್ಲಿ ನಡೆಯುವ ಚಾಮರಾಜನಗರ ಮೀಸಲು ಲೋಕಸಭಾ ಚುನಾವಣೆಯಲ್ಲೂ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಬಿಜೆಪಿ ಪಕ್ಷದ ವರಿಷ್ಠರ ಗಮನಕ್ಕೆ ತರಬಯಸುತ್ತೇವೆ ಎಂದರು.

ಗೋಷ್ಠಿಯಲ್ಲಿ ಮುಖಂಡರಾದ ಸಿ.ಶಿವಲಿಂಗಯ್ಯ, ಅನುಶ್ರೀ, ಸುನಂದ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ