Sunday, September 8, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಎಸ್ಸಿ, ಎಸ್ಟಿ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ: ಅನ್ನದಾನಿ

ಎಸ್‌ಸಿ ಎಸ್‌ಟಿ ಅಭಿವೃದ್ಧಿಗಾಗಿ ಇರುವ ಸಾವಿರಾರು ಕೋಟಿ ಅನುದಾನವನ್ನು ಬೇರೆ ಬೇರೆ ಯೋಜನೆಗಳಿಗೆ ಬಳಕೆ ಮಾಡುವುದರ ಮೂಲಕ ಸಿಎಂ ಸಿದ್ದರಾಮಯ್ಯ ಅವರು ದಲಿತ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆಂದು ಮಾಜಿ ಶಾಸಕ ಡಾ. ಅನ್ನದಾನಿ ಕಿಡಿಕಾರಿದರು

ಮಳವಳ್ಳಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಜೆಡಿಎಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಅಕ್ರಮ ನಡೆದಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಮೀಸಲಿಟ್ಟಿದ್ದ ಹಣವನ್ನು ಚುನಾವಣೆಗೆ ಬಳಸಿಕೊಂಡಿದ್ದಾರೆ. ಅಲ್ಲದೇ ಎಸ್‌ಸಿ ಎಸ್‌ಟಿ ಅಭಿವೃದ್ಧಿಗಾಗಿ ಇರುವ ಸಾವಿರಾರು ಕೋಟಿ ಅನುದಾನವನ್ನು ಬೇರೆ ಬೇರೆ ಯೋಜನೆಗಳಿಗೆ ಬಳಕೆ ಮಾಡುವುದರ ಮೂಲಕ ಸಿದ್ದರಾಮಯ್ಯ ಅವರು ದಲಿತ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ಎಂದು ಹೆಸರು ಕಟ್ಟಿಕೊಂಡು ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರಿಗೆ ಮೋಸ ಮಾಡಿ ದಲಿತರ ಹಣವನ್ನು ನುಂಗುತ್ತಿರುವ ಅವರಿಗೆ ಅಹಿಂದ ನಾಯಕ ಎಂದು ಹೆಸರೇಳಲು ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಬಿ.ರವಿ ಕಂಸಾಗರ, ತಾಲ್ಲೂಕು ಅಧ್ಯಕ್ಷ ವಿ.ಎಂ.ವಿಶ್ವನಾಥ್, ಪುರಸಭೆ ಸದಸ್ಯ ಟಿ.ನಂದಕುಮಾರ್, ಪಿಎಲ್‌ಡಿ ಬ್ಯಾಂಕ್ ನಿರ್ದೆಶಕ ನಿಂಗಣ್ಣ ಮುಖಂಡರಾದ ಡಿ.ಜಯರಾಮು, ಕಾಂತರಾಜು, ಬೂವಳ್ಳಿ ಸದಾನಂದ, ಪುಟ್ಟರಾಮು, ಸಿದ್ದಾಚಾರಿ, ಪುಟ್ಟಬುದ್ಧಿ, ಕಿಟ್ಟಿ, ಮೆಹಬೂಬ್ ಪಾಷಾ, ಆನಂದ್, ಗುರುಪ್ರಸಾದ್, ಜಯರಾಮು ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!