Friday, November 20, 2026

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ವಕೀಲರ ನೇಮಕಾತಿ |ಎಸ್‌ಸಿ, ಎಸ್‌ಟಿ ವಕೀಲರಿಗೆ ಶೇ. 24 ಮೀಸಲಾತಿ ಕಲ್ಪಿಸಲು ಸರ್ಕಾರ ಆದೇಶ

ಸರ್ಕಾರಿ ವಕೀಲರನ್ನು ನೇಮಕ ಮಾಡಿಕೊಳ್ಳುವಾಗ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಕೀಲರಿಗೆ ಶೇಕಡಾ 24ರಷ್ಟು ಮೀಸಲಾತಿ ಕಲ್ಪಿಸುವಂತೆ ಸಮಾಜ ಕಲ್ಯಾಣ ಆದೇಶಿಸಿದೆ.

ಸರ್ಕಾರಿ ವಕೀಲರನ್ನು ನೇಮಿಸುವಾಗ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಪರಿಶಿಷ್ಟ ಜಾತಿ ವಕೀಲರಿಗೆ ಶೇ. 17 ಮತ್ತು ಪರಿಶಿಷ್ಟ ಪಂಗಡಗಳ ವಕೀಲರಿಗೆ ಶೇ. 7 ಸೇರಿ ಒಟ್ಟು ಶೇ.24ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ನವೆಂಬರ್‌ 30ರಂದು ಇಲಾಖೆಯು ಆದೇಶ ನೀಡಿದೆ.

2023ರ ಜೂನ್‌ 1ರಂದು ಸಮಾಜ ಕಲ್ಯಾಣ ಸಚಿವ ಹೆಚ್‌. ಸಿ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಇಲಾಖೆ ಮತ್ತು ಸಂಬಂಧಿತ ನಿಗಮಗಳ ಅಧಿಕಾರಿಗಳ ಸಭೆಯಲ್ಲಿ ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ ಶೇ. 24ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಕೀಲರನ್ನು ನೇಮಿಸಿಕೊಳ್ಳಲು ಕಾನೂನು ಇಲಾಖೆಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಮತ್ತು ಸಭಾ ನಡಾವಳಿಯಲ್ಲಿ ಕ್ರಮವಹಿಸಲು ನಿರ್ದೇಶಿಸಿದ್ದರು.

ಇದರ ಅನ್ವಯ ಕಾನೂನು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ಒಪ್ಪಿಗೆ ಸೂಚಿಸಿ 2024ರ ಅಕ್ಟೋಬರ್‌ 22ರಂದು ಕಾನೂನು ಇಲಾಖೆಯ ಅಭಿಪ್ರಾಯ ನೀಡಿತ್ತು. ಈ ಹಿನ್ನೆಲೆ ಮೀಸಲಾತಿ ಕಲ್ಪಿಸುವಂತೆ ನವೆಂಬರ್ 30, 2024ರಂದು ಸಮಾಜ ಕಲ್ಯಾಣ ಇಲಾಖೆ ಆದೇಶ ಮಾಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ