Thursday, November 19, 2026

ಪ್ರಾಯೋಗಿಕ ಆವೃತ್ತಿ

ಮೀಸಲಾತಿ ಹೆಸರಿನಲ್ಲಿ ಬಿಜೆಪಿ ಸರ್ಕಾರದಿಂದ ಎಸ್ಸಿ ಎಸ್ಟಿಗಳಿಗೆ ಮೋಸ : ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಸುಳ್ಳಿನ ಬುರುಡೆ ಬಿಡುವುದನ್ನೇ ಕರಗತ ಮಾಡಿರುವ ರಾಜ್ಯ ಬಿಜೆಪಿ

“>

ಸರ್ಕಾರ ಮೀಸಲಾತಿ ಹೆಸರಲ್ಲಿ ಲಿಂಗಾಯತ ಪಂಚಮಸಾಲಿ, ಒಕ್ಕಲಿಗ ಸಮುದಾಯಗಳ ಹಣೆಗೆ ತುಪ್ಪ ಹಚ್ಚಿದ್ದಾಯ್ತು. ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಸಂಬಂಧ ಕೇಂದ್ರಕ್ಕೆ ಯಾವುದೇ ಪ್ರಸ್ತಾಪವನ್ನೂ ಕಳಿಸದೇ, ಅವರಿಗೂ ಮೋಸ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಕುರಿತು ಲೋಕಸಭೆಯಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಕೇಳಿದ ಪ್ರಶ್ನೆಗೆ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಲಿಖಿತ ಉತ್ತರ ನೀಡಿದ್ದಾರೆ. ಎಲ್ಲ ಸಮುದಾಯಗಳನ್ನು ಭ್ರಮೆಯಲ್ಲಿ ತೇಲಿಸಬಹುದು ಎಂದು ರಾಜ್ಯ ಸರ್ಕಾರ ಭಾವಿಸಿದಂತಿದೆ ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ಆಕ್ರೋಶ ಹೊರಹಾರಿದ್ದಾರೆ.

ಮೀಸಲು ಹೆಚ್ಚಳದ ನಿರ್ಣಯವನ್ನು ಸಂವಿಧಾನದ 9ನೇ ವಿಧಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳಿಸಲು ಇನ್ನೂ ಮೀನ-ಮೇಷ ಎಣಿಸುತ್ತಿರುವುದು ಏಕೆ? ಫೆ. 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿತ್ತಲ್ಲವೆ? ಸಮುದಾಯಗಳ ಭಾವನೆಗಳ ಜತೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ ಎಂದು ಅವರು ಚಾಟಿ ಬೀಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ