Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತವಣೆ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ. 080-35254757 ಅಥವಾ 8050770005 ಅನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!