Thursday, June 13, 2024

ಪ್ರಾಯೋಗಿಕ ಆವೃತ್ತಿ

ಶಾಲಾಮಕ್ಕಳಿಗೆ ನೋಟ್ ಬುಕ್ ವಿತರಿಸಿದ ಸಚ್ಚಿದಾನಂದ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಯುವನಾಯಕ ಇಂಡುವಾಳು ಸಚ್ಚಿದಾನಂದ ಶಾಲಾ ಮಕ್ಕಳಿಗೆ ನೋಟ್‌ಬುಕ್ ವಿತರಣೆ ಮಾಡಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಇಂಡುವಾಳು ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ನೂರಾರು ಮಕ್ಕಳಿಗೆ ಇಂಡುವಾಳು ಎಸ್. ಸಚ್ಚಿದಾನಂದ ನೋಟ್ ಬುಕ್ ವಿತರಿಸಿ ಶುಭಹಾರೈಸಿದರು.

ಇಂದು ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಆಗಿದ್ದು ಬೆಂಗಳೂರು ನಗರ ನಿರ್ಮಾಣ ಮಾಡಿದ ಕೆಂಪೇಗೌಡರ ಆದರ್ಶಗಳನ್ನು ವಿದ್ಯಾರ್ಥಿಗಳು ತಿಳಿದು ಅವರ ಮಾರ್ಗದಲ್ಲಿ ನಡೆಯಬೇಕು. ಕೆಂಪೇಗೌಡರು ನಮ್ಮ ನಾಡಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ, ಕೆಂಪೇಗೌಡರ ಜನಪರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದರು.

ವಿದ್ಯಾರ್ಥಿಗಳು ಕಲಿಕೆಯ ಕಡೆ ಆಸಕ್ತಿ ವಹಿಸಿ ಉತ್ತಮ ಅಂಕಗಳನ್ನು ಪಡೆದು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತರಬೇಕೆಂದು ಶುಭಹಾರೈಸಿದರು.

ಈ ಸಂಧರ್ಭದಲ್ಲಿ ಶಿಕ್ಷಕರು, ಎಸ್‌‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮದ ಯುವಕ ಮಿತ್ರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!