Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಆ.30ಕ್ಕೆ ವಿಜ್ಞಾನೋತ್ಸವ – ವಿಜ್ಞಾನ ತರಂಗ ಸ್ಪರ್ಧೆ

ಆಧ್ಯಾಪನ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ , ಮಂಡ್ಯ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಮಂಡ್ಯ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್ ಇವರ ಸಹಭಾಗಿತ್ವದಲ್ಲಿ ವಿಜ್ಞಾನೋತ್ಸವ – 2025, ಜಿಲ್ಲಾ ಮಟ್ಟದ ವಿಜ್ಞಾನ ತರಂಗ ಸ್ಪರ್ಧೆಯನ್ನು ಆ.30 ರಂದು ಮಧ್ಯಾಹ್ನ 2 ಗಂಟೆಗೆ ಮಂಡ್ಯ ಹೊರವಲಯದ ಎ ಅಂಡ್ ಎ ಕನ್ವೆನ್ಷನ್ ಹಾಲ್ ನಲ್ಲಿ ಏರ್ಪಡಿಸಲಾಗಿದೆ ಎಂದು ಅಧ್ಯಾಪನ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಎಂ.ಜಿ. ದಿವ್ಯಶ್ರೀ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಇಸ್ರೋ ಮಾಜಿ ಅಧ್ಯಕ್ಷ ಎಸ್.ಕಿರಣ್ ಕುಮಾರ್ ವಹಿಸಲಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವ ಮಧು ಬಂಗಾರಪ್ಪ ಮತ್ತು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು ಎಂದು ಹೇಳಿದರು.

ಮಂಡ್ಯ ಜಿಲ್ಲೆಯ 7 ತಾಲೂಕಿನ ಶಾಸಕರು ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜಿಲ್ಲಾಡಳಿತ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್ ವಹಿಸುವರು ಎಂದು ತಿಳಿಸಿದರು.

2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿಯರಾದ ಧೃತಿ ಮತ್ತು ಪುನೀತ ಅವರಿಗೆ ಇದೇ ಸಂದರ್ಭದಲ್ಲಿ ಅಭಿನಂದಿಸಲಾಗುವುದು ಎಂದು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಮನವಿ ಕೂಡ ಇದೇ ಸಂದರ್ಭದಲ್ಲಿ ಮಾಡಿದರು.

ಗೋಷ್ಠಿಯಲ್ಲಿ ಅಧ್ಯಾಪನ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಪ್ರವೀಣ್ ಕುಮಾರ್ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ