Friday, November 20, 2026

ಪ್ರಾಯೋಗಿಕ ಆವೃತ್ತಿ

ವಿಜ್ಞಾನ ವಸ್ತು ಪ್ರದರ್ಶನಗಳಿಂದ ಪ್ರತಿಭೆ ಅನಾವರಣ

ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಸ್ತು ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿಕೊಡುವುದರಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಗೊಳ್ಳುವುದರ ಜೊತೆಗೆ ವೈಜ್ಞಾನಿಕ ಮನೋಭಾವ ಅರಳಿಸಲು ಹೆಚ್ಚಿನ ಆದ್ಯತೆ ನೀಡಿದಂತಾಗುತ್ತದೆ ಎಂದು ಶಿಕ್ಷಣ ಇಲಾಖೆಯ ವಿಜ್ಞಾನ ವಿಷಯ ಪರಿವೀಕ್ಷಕ ನಂಜರಾಜು ಹೇಳಿದರು.

ಮಂಡ್ಯನಗರದ ಡ್ಯಾಪೋಡಿಲ್ಸ್ ಶಾಲೆಯಲ್ಲಿ ವಿ.ಎಲ್.ಎನ್. ಶಿಕ್ಷಣ ಸಂಸ್ಥೆ ಆಯೋಜಿಸಿರುವ ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಸ್ತು ಪ್ರದರ್ಶನ ಅಭಿಯಾನವನ್ನು ಗಣ್ಯರೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಮಾಡಲ್‌ಗಳನ್ನು ಪ್ರದರ್ಶಿಸಿದ್ದಾರೆ, ವೈಜ್ಞಾನಿಕ ಮನೋಭಾವ ಅನಾವರಣಕೆ ಹೆಚ್ಚಿನ ಮಹತ್ವ ನೀಡುವುದು  ಅತ್ಯವಶ್ಯಕ. ಇವತ್ತಿನ ತಂತ್ರಜ್ಞಾನ, ಪರಿಸರ ಕಾಳಜಿ ಬಗ್ಗೆ ಅರಿವು ಹೆಚ್ಚಿಸಲಾಗುತ್ತಿದೆ, ಕ್ರಿಯಾತ್ಮಕ ಮನೋಶಕ್ತಿಗೆ ಉತ್ತೇಜನ ನೀಡಲಾಗುತ್ತಿದೆ, ಇದು ವೈಜ್ಞಾನಿಕ ವಿಷಯಗಳನ್ನು ಅಭಿವ್ಯಕ್ತಗೊಳಿಸಲಿಕ್ಕೆ ಸಹಕಾರಿಯಾಗುತ್ತದೆ ಎಂದರು.

ಡ್ಯಾಫೋಡೀಲ್ಸ್ ಶಾಲೆಯ ಕಾರ್ಯದರ್ಶಿ ಸುಜಾತಕೃಷ್ಣ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲಿಕ್ಕಾಗಿ ಆಯೋಜನೆ ಪ್ರದರ್ಶನ ಮಾಡಲಾಗಿದೆ, ಕೊವಿಡ್-19ರ ದಿನಗಳಲ್ಲಿ 4 ವರ್ಷ ಕಾಲ ವಿಜ್ಞಾನ ವಸ್ತು ಪ್ರದರ್ಶನ ಮಾಡಲು ಸಾಧ್ಯವಾಗಲಿಲ್ಲ, ಈ ವರ್ಷ ಉತ್ತಮವಾಗಿ ಆಯೋಜಿಸಲಾಗಿದೆ ಎಂದು ನುಡಿದರು.

ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ವೇದಿಕೆ ನಿರ್ಮಿಸಲಾಗಿದೆ, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡಿದ್ದಾರೆ. ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಂತ್ರಜ್ಞಾನ, ವಿಜ್ಞಾನದ ಅವಿಷ್ಕಾರಗಳು, ಪ್ರಾಕೃತಿಕ ಸಂಪತ್ತು ರಕ್ಷಣೆ, ಐತಿಹಾಸಿಕ ಸ್ಥಳಗಳು, ಬಣ್ಣಗಳ ವರ್ಗೀಕರಣ, ಬೆಳಕಿನ ಶಕ್ತಿ ಬಳಕೆ, ಗಾಳಿ, ನೀರಿನ ಶಕ್ತಿ ಬಳಕೆ, ಪ್ರಾಣಿ-ಪಕ್ಷಿ ಸಂರಕ್ಷಣೆಗೆ ಹಸಿರು ಯೋಜನೆ, ಆಹಾರ ಪದ್ದತಿ, ಜೀವನ ಪದ್ದತಿ, ಆಧುನಿಕ ಮನುಷ್ಯರ ಜೀವನ ಶೈಲಿ, ಯಂತ್ರ-ತಂತ್ರಗಳ ಬಳಕೆ ಸೇರಿದವಂತೆ ನೂರಾರು ಮಾಡೆಲ್‌ಗಳನ್ನು ತಯಾರಿಸಿದ್ದಾರೆ ಎಂದರು.

ಶಾಲೆಯ 4ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳು 200ಕ್ಕೂ ಹೆಚ್ಚು ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯ ಕುರಿತು ಮಾಡಲ್‌ಗಳನ್ನು ತಯಾರಿಸಿ ಪ್ರದರ್ಶಿಸಿ, ವೈಜ್ಞಾನಿಕ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಡಾ. ಪ್ರದೀಪ್‌ಕುಮಾರ್‌ಹೆಬ್ರಿ, ಶಿಕ್ಷಣ ಇಲಾಖೆ ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕರಾದ ಲಕ್ಷ್ಮಿ, ಶಾಲೆ ಎ.ಓ.ದೀಪ್ತಿ, ಮುಖ್ಯ ಶಿಕ್ಷಕಿ ನಾಗರತ್ನ, ಟ್ರಸ್ಟಿ ಮದನ್‌ಲಾಲ್ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ